ಅಭಿವೃದ್ಧಿ, ಸ್ವಾವಲಂಬಿ ಭಾರತದ ಗುರಿ ಹೊಂದಿರುವ ಎನ್ಇಪಿ: ಸಚಿವ ಬಿ.ಸಿ ನಾಗೇಶ್

00:00
00:00

ಬೆಂಗಳೂರು

ಮಾನ್ಯತೆ ಪಡೆದ ಅನುದಾನರಹಿತ ಖಾಸಗಿ ಶಾಲೆಗಳ ಸಂಘ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ‘ಅತ್ಯುತ್ತಮ ಶಿಕ್ಷಕ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಹಾಗೂ ಸಕಾಲ ಸಚಿವ ಬಿ.ಸಿ ನಾಗೇಶ್, ದೇಶದ ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಒದಗಿಸುವುದರ ಮೂಲಕ ಸ್ವಾವಲಂಬಿ ಮತ್ತು ಅಭಿವೃದ್ಧಿ ಹೊಂದಿರುವ ದೇಶವಾಗಿ ಪರಿವರ್ತಿಸುವ ಮೂಲ ಉದ್ದೇಶದೊಂದಿಗೆ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ರೂಪಿಸಿ ಜಾರಿಗೆ ತರಲಾಗುತ್ತಿದೆ ಎಂದರು. ಇದೇ ವೇಳೆ 38 ಅತ್ಯುತ್ತಮ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು. ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರ್ ಎಸ್. ಸಾಹುಕಾರ್, ರುಪ್ಸ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ, ರೂಪ್ಸ ಗೌರವಾಧ್ಯಕ್ಷ ಸಿ.ಎನ್ ಭಂಡಾರೆ ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.