ಬಿಂಡಿಗದ ದೇವಿರಮ್ಮ ದರ್ಶನಕ್ಕೆ ಹರಿದು ಬಂದ ಭಕ್ತಸಾಗರ
ಚಿಕ್ಕಮಗಳೂರು ತಾಲ್ಲೂಕಿನ ಮಲ್ಲೇನಹಳ್ಳಿ ಸಮೀಪದಲ್ಲಿರೋ ಬಿಂಡಿಗದ ದೇವಿರಮ್ಮ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಾಗಿದ್ದು, ದೇವಿರಮ್ಮ ದರ್ಶನ ಮಾಡಲು ಭಕ್ತಸಾಗರವೇ ಹರಿದು ಬರುತ್ತಿದೆ. ವರ್ಷಕ್ಕೊಮ್ಮೆ ದರ್ಶನವನ್ನು ನೀಡುವ ದೇವಿರಮ್ಮ ತಾಯಿ ನೋಡಲು ಮಧ್ಯರಾತ್ರಿಯಿಂದಲೇ ಭಕ್ತರು ಬೆಟ್ಟವನ್ನೇರಿ ದೇವಿಯ ಕೃಪೆಗೆ ಪಾತ್ರರಾಗುತ್ತಿದ್ದಾರೆ. ಮೂರು ಸಾವಿರ ಅಡಿ ಎತ್ತರದಲ್ಲಿರುವ ದೇವಿರಮ್ಮ ದೇವಸ್ಥಾನಕ್ಕೆಂದು ರಾಜ್ಯದ ಮೂಲೆ ಮೂಲೆಗಳಿಂದ ಭಕ್ತರು ಆಗಮಿಸುತ್ತಿದ್ದಾರೆ.