ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ಇಂದಿನಿಂದ ಗುರುವಾರ ಮಧ್ಯಾಹ್ನದವರೆಗೆ ಪ್ರವೇಶ ನಿಷೇಧ

ಮೈಸೂರು: ನಾಳೆ ಮಹಾಲಯ ಅಮಾವಾಸ್ಯೆ (Mahalaya Amavasya ) ಇರುವ ಕಾರಣ ರಾಜ್ಯ ಸೇರಿದಂತೆ ಹೊರ ರಾಜ್ಯದಿಂದ ಹೆಚ್ಚಿನ ಮಂದಿ ನಾಡ ದೇವತೆ ಚಾಮುಂಡೇಶ್ವರಿಗೆ ದೇವಾಲಯಕ್ಕೆ ಬರುವ ಹಿನ್ನಲೆಯಲ್ಲಿ ಮೈಸೂರು ಜಿಲ್ಲಾಡಳಿತ ಎಚ್ಚೆತ್ತುಕೊಂಡಿದೆ. ಈ ನಡುವೆ ಅಕ್ಟೋಬರ್ (October) 5ರ ಬೆಳಗಿನ ಜಾವ 4 ಗಂಟೆಯಿಂದ 07ರ ಮಧ್ಯಾಹ್ನದವರೆಗೂ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದೆ.
ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ (District Collector Dr. Bagadi Gautam) ಅವರು ಈ ಆದೇಶವನ್ನು ಹೊರಡಿಸಿದ್ದು, ಇಂದಿನಿಂದ ಗುರುವಾರ ಮಧ್ಯಾಹ್ನದವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಿದ್ದಾರೆ. ದ್ದರಿಂದ ಅಕ್ಟೋಬರ್ 5ರ ಬೆಳಗಿನ ಜಾವ 4 ಗಂಟೆಯಿಂದ ಅಕ್ಟೋಬರ್ 07ರ ಮಧ್ಯಾಹ್ನದ ವರೆಗೂ ನಿರ್ಬಂಧ ಹೇರಲಾಗಿದೆ. ಆದರೆ ಧಾರ್ಮಿಕ ಪೂಜಾ ವಿಧಿ-ವಿಧಾನಗಳು ಎಂದಿನಂತೆ ನಡೆಯಲಿದೆ.