ಐಪಿಎಲ್ ಬಳಿಕ ಧೋನಿ ವಿದಾಯ? ಊಹಾಪೋಹಗಳಿಗೆ ತೆರೆ ಎಳೆದ ಕೂಲ್ ಕ್ಯಾಪ್ಟನ್

ಐಪಿಎಲ್ ಬಳಿಕ ಧೋನಿ ವಿದಾಯ? ಊಹಾಪೋಹಗಳಿಗೆ ತೆರೆ ಎಳೆದ ಕೂಲ್ ಕ್ಯಾಪ್ಟನ್

ದುಬೈ: ಪ್ರಸಕ್ತ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯ ಬಳಿಕ ಎಲ್ಲ ಮಾದರಿಯ ಕ್ರಿಕೆಟ್‌ಗೂ ಮಹೇಂದ್ರ ಸಿಂಗ್ ಧೋನಿ ವಿದಾಯ ಸಲ್ಲಿಸಲಿದ್ದಾರೆ ಎಂಬುದಕ್ಕೆ ಸಂಬಂಧಿಸಿದಂತೆ ವದಂತಿಗಳು ಹರಿದಾಡುತ್ತಿವೆ.

ಈ ಕುರಿತಾಗಿ ಸ್ವತಃ ಧೋನಿ, ಚೆನ್ನೈಯಲ್ಲಿ ಕೊನೆಯ ಪಂದ್ಯ ಆಡುವ ಬಗ್ಗೆ ಆಶಾದಾಯಕವಾಗಿದ್ದೇನೆ ಎಂದು ಹೇಳುವ ಮೂಲಕ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಇದರಿಂದ ಮುಂದಿನ ವರ್ಷ ಭಾರತದಲ್ಲಿ ನಡೆಯಲಿರುವ ಐಪಿಎಲ್‌ನಲ್ಲಿ ಧೋನಿ ಆಡುವುದು ಬಹುತೇಕ ಖಚಿತವೆನಿಸಿದೆ.