ಸಲೀಂ ಗೆ ಸಲಾಂ ಎಂದ ಮತದಾರ ಪ್ರಭುಗಳು ಸಲೀಂ ಹೇಳಿದ್ದೇನು?...
ಧಾರವಾಡ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ಗೆ ನಡೆದ ಚುನಾವಣೆಯಲ್ಲಿ ಅತೀ ಹೆಚ್ಚಿನ ಮೊದಲ ಪ್ರಾಶ್ಯಸ್ತ್ಯದ ಮತಗಳು ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರಿಗೆ ಬಂದಿದ್ದು, ಆ ಮೂಲಕ ಸಲೀಂ ಅಹ್ಮದ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಧಾರವಾಡದ ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆದ ಮತ ಎಣಿಕಾ ಪ್ರಕ್ರಿಯೆ ಮುಕ್ತಾಯಗೊಂಡ ನಂತರ ಮೊದಲ ಪ್ರತಿಕ್ರಿಯೆ ನೀಡಿರುವ ಸಲೀಂ ಅಹ್ಮದ್, ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಗೆಲುವಾಗಿದೆ. ಕಾಂಗ್ರೆಸ್ ಪಕ್ಷದ ತತ್ವ ಮತ್ತು ಸಿದ್ಧಾಂತಕ್ಕೆ ಈ ಚುನಾವಣೆಯಲ್ಲಿ ಗೆಲುವು ಲಭಿಸಿದಂತಾಗಿದೆ ಎಂದರು..ಕಾಂಗ್ರೆಸ್ನ ಎಲ್ಲ ನಾಯಕರಿಗೆ ಧನ್ಯವಾದ ಸಲ್ಲಿಸುತ್ತೇನೆ. ಗ್ರಾಮ ಸ್ವರಾಜ್ನ್ನು ಈ ಸರ್ಕಾರ ದುರ್ಬಲ ಮಾಡಿದೆ. ರಾಜೀವ್ ಗಾಂಧಿ ಅವರು ಗ್ರಾಮೀಣ ಕ್ಷೇತ್ರಗಳಿಗೆ ಹೆಚ್ಚು ಒತ್ತು ಕೊಟ್ಟಿದ್ದರು. ಬೆಲೆ ಏರಿಕೆ ಸೇರಿದಂತೆ ಅನೇಕ ರೀತಿಯ ಸಮಸ್ಯೆಗಳನ್ನು ಈ ಸರ್ಕಾರ ಜನರಿಗೆ ತಂದೊಡ್ಡಿದೆ. ಈ ಎಲ್ಲ ಸಮಸ್ಯೆಗಳ ವಿರುದ್ಧ ನಾನು ಧ್ವನಿ ಎತ್ತುತ್ತೇನೆ. ಜನರ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದಿದ್ದಾರೆ..ಈ ಭಾಗದಲ್ಲಿ ಜನರ ಏನೆಲ್ಲ ಸಮಸ್ಯೆಗಳಿವೆಯೋ ಅವುಗಳ ಬಗ್ಗೆ ಚರ್ಚೆ ಮಾಡುತ್ತೇನೆ. ಯಾರೊಬ್ಬರಿಗೂ ಬಿಜೆಪಿ ಸರ್ಕಾರ ಒಂದೇ ಒಂದು ಮನೆ ಕಟ್ಟಿಕೊಟ್ಟಿಲ್ಲ. ಯಾವ ಪುರುಷಾರ್ಥಕ್ಕೆ ಬಿಜೆಪಿಗೆ ಮತ ಹಾಕಬೇಕು? ಈ ಚುನಾವಣೆ ಮೂಲಕ ಬಿಜೆಪಿಗೆ ಒಂದು ಒಳ್ಳೆಯ ಸಂದೇಶ ಹೋದಂತಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಏಳುತ್ತಿದೆ. ಬಿಜೆಪಿಗೆ ಸೋಲುವ ಭಯ ಈಗಿನಿಂದಲೇ ಕಾಡುತ್ತಿದೆ. ನಾವು ಯಾವುದೇ ರೀತಿಯ ಹೊಂದಾಣಿಕೆ ರಾಜಕಾರಣ ಮಾಡುವುದಿಲ್ಲ ಎಂದು ಹೇಳಿದ್ದಾರೆ...