ಆಹಾರ ಪದ್ಧತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ|Chikkamagaluru|

ಮಕ್ಕಳ ಆಹಾರವನ್ನು ತಾಯಿಗೆ ಬಿಡಬೇಕು, ತಾಯಿಗಿಂತ ಮಕ್ಕಳನ್ನ ಚೆನ್ನಾಗಿ ಯಾರೂ ನೋಡಿಕೊಳ್ಳಲ್ಲ, ಮೊಟ್ಟೆ ಬದಲು ಆ ತಾಯಿ ಕೈಗೆ ದುಡ್ಡು ಕೊಟ್ಟರೆ, ಇನ್ನು ಚೆನ್ನಾಗಿ ಆಹಾರವನ್ನ ಹಾಕಬಹುದು ಈ ಬಗ್ಗೆಯೂ ಚರ್ಚೆ ಆಗಬೇಕು ಎಂದು ಮೊಟ್ಟೆ ವಿವಾದಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದರು. ಚಿಕ್ಕಮಗಳೂರಿನ ಮೂಡಿಗೆರೆಯಲ್ಲಿ ಮಾತನಾಡಿ, ಆಹಾರ ಪದ್ಧತಿ ಅವರವರ ಆಯ್ಕೆ, ಇದಕ್ಕೆ ಒತ್ತಡ ಹೇರುವುದು ಸರಿಯಲ್ಲ. ಸರ್ಕಾರ, ಯಾವುದೇ ವ್ಯಕ್ತಿಗಳು ಒತ್ತಡ ತಂದು ಬದಲಾಯಿಸಲು ಆಗುವುದಿಲ್ಲ ಎಂದು ಹೇಳಿದರು.