ಮಕ್ಕಳನ್ನು ಪುಷ್ಪ ನೀಡಿ, ಅಂಗನವಾಡಿ ಕೇಂದ್ರಕ್ಕೆ ಸ್ವಾಗತಿಸಿದ ಜಿಲ್ಲಾಧಿಕಾರಿ ನಿತೇಶ ಪಾಟೀಲ
ಧಾರವಾಡ ರಾಜೀವಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪುಷ್ಪ ನೀಡುವ ಮೂಲಕ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಸ್ವಾಗತಿಸಿದರು. ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳಿಗೆ ಆರತಿ ಬೆಳಗಿ ಬರಮಾಡಿಕೊಂಡರು. ನಂತರ ಜಿಲ್ಲಾಧಿಕಾರಿಗಳು ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಾಲಿಕೆ ಸದಸ್ಯರೊಂದಿಗೆ ಮಕ್ಕಳಿಗೆ ನೀಡುವ ಆಹಾರ ಪೊಟ್ಟಣ, ಅಂಗನವಾಡಿ ಕೇಂದ್ರದ ಸೌಲಭ್ಯಗಳು ಹಾಗೂ ಮಕ್ಕಳ ಕಲಿಕೆಯ ಕುರಿತು ಮಾಹಿತಿ ಪಡೆದರು. ಮತ್ತು ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಪೂರೈಕೆ ಕುರಿತು ಗರ್ಭಿಣಿ ಮಹಿಳೆಯರಿಂದ ಮಾಹಿತಿ ಪಡೆದರು. ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಕುಳಿತು ಜಿಲ್ಲಾಧಿಕಾರಿಗಳು ಅವರ ಕಲಿಕೆ ಆಲಿಸಿದರು.