ನೂತನ ಆಧಾರ ಸೇವಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ನಿತೀಶ ಚಾಲನೆ
ಧಾರವಾಡದ ಕೆ.ಸಿ.ಪಾರ್ಕ್ ಎದುರಿನ ಮಂಡಿ ಪ್ಲಾಜಾದಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಆಧಾರ್ ಸೇವಾ ಕೇಂದ್ರವನ್ನು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ಉದ್ಘಾಟಿಸಿದರು. ಆಧಾರ್ ನೋಂದಣಿ ಪ್ರಕ್ರಿಯೆಯನ್ನು ವೀಕ್ಷಿಸಿದ ನಂತರ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು,ಆಧಾರ್ ನೋಂದಣಿ ಹಾಗೂ ಮಾಹಿತಿಯನ್ನು ಅಪ್ಡೇಟ್ ಮಾಡಲು ಈ ಕೇಂದ್ರ ಸಹಕಾರಿಯಾಗಲಿದೆ. ಜಿಲ್ಲೆಯ ಜನತೆ ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದರು. ಇನ್ನು ಕಾರ್ಯಕ್ರಮದಲ್ಲಿ ಆಧಾರ್ ಸೇವಾ ಕೇಂದ್ರದ ಮ್ಯಾನೇಜರ್ ಸ್ವಾತಿ ಕೊಟಬಾಗಿ,ಅರ್ಜುನ ವಡ್ಡರ ಮತ್ತಿತರರು ಉಪಸ್ಥಿತರಿದ್ದರು.