ಡಾ. ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ
ರಾಜ್ಯದ ಗಣ್ಯ ವ್ಯಕ್ತಿಗಳಾದ ಡಾ.ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ದೊರಕಿದೆ. ರಾಷ್ಟ್ರಪತಿ ಭವನದಲ್ಲಿ ಇಂದು ಬೆಳ್ಳಗೆ ಖ್ಯಾತ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರಿಗೆ ರಾಷ್ಟ್ರಪತಿ ರಾಮನಾಥ ಕೋವಿಂದ ಅವರು ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿದ್ರು. ಯಶಸ್ವಿ ಉದ್ಯಮಿ ಕ್ಷೇತ್ರದಲ್ಲಿ ಸಾಧನೆಗೈದಿರು ಡಾ. ವಿಜಯ ಸಂಕೇಶ್ವರ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿದೆ. ವಿ ಆರ್ ಎಲ್ ಸಮೂಹ ಸಂಸ್ಥೆಗಳ ಮೂಲಕ ದೇಶದಲ್ಲೇ ದೊಡ್ಡ ಸರಕು ಸಾಗಾಣಿಕೆ ಉದ್ಯಮ ನಡೆಸುತ್ತಿದ್ದು. ಸಂಸ್ಥೆಯು ಸುಮಾರು 19,ಸಾವಿರ ಉದ್ಯೋಗಿಗಳನ್ನು ಹೊಂದಿದೆ.ಇದಲ್ಲದೆ ಸಾವಿರಾರು ಮಂದಿಗೆ ಪರೋಕ್ಷವಾಗಿ ಉದ್ಯೋಗ ಕಲ್ಪಿಸಿ ಕೊಟ್ಟಿದ ಹೆಮ್ಮೆಯ ಡಾ. ವಿಜಯ ಸಂಕೇಶ್ವರ ಸಾಧನೆಯಾಗಿದೆ.....