ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣಕ್ಕೆ ಚಾಲನೆ

ಬೆಂಗಳೂರು

ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಸೆ. 30 ಗುರುವಾರದಂದು ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಬದಲಾದ ಉದ್ಯೋಗ ಪರ್ವ' ವಿಚಾರ ಸಂಕಿರಣಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವರಾದ ವಿ.ಸುನೀಲ್ ಕುಮಾರ್ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕನ್ನಡಿಗರಿಗೆ ಉದ್ಯೋಗಾವಕಾಶ ದೊರಕಿಸಿ ಕೊಡುವ ನಿಟ್ಟಿನಲ್ಲಿ ವಿದೇಶಿ ಕಂಪೆನಿಗಳನ್ನು ರಾಜ್ಯದಲ್ಲಿ ಬರ ಮಾಡಿಕೊಳ್ಳಲಾಗಿದೆ. ಅವುಗಳೆಲ್ಲದರಲ್ಲೂ ಕನ್ನಡಿಗರಿಗೆ ಉದ್ಯೋಗ ದೊರಕಿಸಿ ಕೊಡುವ ನಿಟ್ಟಿನಲ್ಲಿ ಸರ್ಕಾರದಿಂದ ಎಲ್ಲ ರೀತಿಯ ಪ್ರಯತ್ನಗಳಾಗುತ್ತಿವೆ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ.ಎಸ್.ನಾಗಾಭರಣ, ಕಾರ್ಯಕ್ರಮದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳಾದ ಡಾ.ಸಂತೋಷ ಹಾನಗಲ್ಲ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ತಾಂತ್ರಿಕ ಕೋಶದ ಜಂಟಿ ನಿರ್ದೇಶಕರಾದ ಎಚ್.ಎಸ್ ಜಯಕುಮಾರ್, ಕನ್ನಡಪರ ಚಿಂತಕರಾದ ರಾ.ನಂ.ಚಂದ್ರಶೇಖರ್, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ ಸಂಸ್ಥೆಯ ನಿವೃತ್ತ ನಿರ್ದೇಶಕ ಪೆÇ್ರ. ಚಂದ್ರಕಾಂತ್, ಕೃಷಿ ಉದ್ಯೋಗ ಹಾಗೂ ಮಾಹಿತಿ ತಂತ್ರಜ್ಞಾನ ತಜ್ಞರಾದ ಟಿ.ಜಿ.ಶ್ರೀನಿಧಿ ಉಪಸ್ಥಿತರಿದ್ದರು.