ಚಾಲಕನ ನಿಯಂತ್ರಣ ತಪ್ಪಿ ಬಸ್ಸ್ ಪಲ್ಟಿ ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

ವಿಜಯಪುರ ದಿಂದ ಗಲಗಲಿಗೆ ಹೋಗುತ್ತಿದ್ದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಸಾರವಾಡ ಮತ್ತು ಬಬಲೇಶ್ವರ ಮಧ್ಯ ರಾಜ್ಯ ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದೆ. ಅದೃಷ್ಟವಶಾತ್ ಪ್ರಾಣಾಪಾಯ ಸಂಭವಿಸಿಲ್ಲ. ಬಸ್ಸಿನಲ್ಲಿದ್ದ ಕೆಲವು ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ. ಗಲಗಲಿಗೆ ತೆರಳುತ್ತಿದ್ದ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಬಸ್ ರಸ್ತೆ ಬದಿಯ ಹೊಲದಲ್ಲಿ ಉರುಳಿದೆ ಸಂಭವಿಸಬಹುದಾದ ಭಾರೀ ಅನಾಹುತ ತಪ್ಪಿದೆ. ಬಸ್ಸಿನಲ್ಲಿ ವಿದ್ಯಾರ್ಥಿಗಳು, ಹಾಗೂ ಪ್ಯಾಸ್ಯಂಜರ್ ಸೇರಿ ಸುಮಾರು 60ಕ್ಕೂ ಹೆಚ್ಚು ಜನ ಇದ್ದರು. ಅಪಘಾತ ಸಂಭವಿಸುತ್ತಿದ್ದಂತೆಯೇ ಪ್ರಯಾಣಿಕರು ಬಸ್ಸಿನ ಕಿಟಕಿ, ಗಾಜುಗಳನ್ನು ಒಡೆದು ಪಾರಾಗಿದ್ದಾರೆ