ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಿಚಾರಣೆ
ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಿಚಾರಣೆ
ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣವಾಗಿ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಇಡಿ ವಿಚಾರಣೆಗೆ ಒಳಗಾಗಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆ ನಡೆಸಿದ್ದು, ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎನ್ನಲಾಗಿದೆ.
ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಸುಲಿಗೆ ಜಾಲವು ಇತ್ತೀಚೆ ಪತ್ತೆ ಆಗಿತ್ತು. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎಂಬ ರೀತಿಯಲ್ಲಿ ವಿಚಾರಣೆ ಅವರನ್ನು ವಿಚಾರಣೆ ಮಾಲಾಗಿದೆ ಎನ್ನಲಾಗಿದೆ.
ಸುಕೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು.