ಅಕ್ರಮ ಹಣ ವರ್ಗಾವಣೆ ಪ್ರಕರಣ: ತೃಣಮೂಲ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಈ.ಡಿ.ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ತೃಣಮೂಲ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಈ.ಡಿ.ಸಮನ್ಸ್

ಅಕ್ರಮ ಹಣ ವರ್ಗಾವಣೆ ಪ್ರಕರಣ: ತೃಣಮೂಲ ನಾಯಕ ಅಭಿಷೇಕ್ ಬ್ಯಾನರ್ಜಿಗೆ ಈ.ಡಿ.ಸಮನ್ಸ್

ಹೊಸದಿಲ್ಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು (ಈ.ಡಿ)ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದ ಅಭಿಷೇಕ್ ಬ್ಯಾನರ್ಜಿ ಹಾಗೂ ಅವರ ಪತ್ನಿ ರುಜಿರಾ ಬ್ಯಾನರ್ಜಿಗೆ ಸೆಪ್ಟಂಬರ್ 1ರಂದು ತನ್ನೆದುರು ಹಾಜರಾಗಲು ಸಮನ್ಸ್ ನೀಡಿದೆ ಎಂದು NDTV ವರದಿ ಮಾಡಿದೆ.

ಸಿಬಿಐನ ಎಫ್‌ಐಆರ್ ಅನ್ನು ಗಮನಿಸಿದ ಈಡಿ, ಪಶ್ಚಿಮ ಬಂಗಾಳದಲ್ಲಿ ಸಾರ್ವಜನಿಕ ಸೇವಕರ ಸಹಭಾಗಿತ್ವದಲ್ಲಿ ನಡೆಸಲಾದ ಸರಕಾರಿ ಕಲ್ಲಿದ್ದಲು ಕ್ಷೇತ್ರಗಳಲ್ಲಿ ಕಳ್ಳತನದ ಆರೋಪದ ಮೇಲೆ ಅಕ್ರಮ ಹಣ ವರ್ಗಾವಣೆ ಕುರಿತು ತನಿಖೆಯನ್ನು ಆರಂಭಿಸಿತು.

ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗ ಸಿಬಿಐ ಇದೇ ಪ್ರಕರಣದಲ್ಲಿ ತೃಣಮೂಲ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪತ್ನಿಯನ್ನು ಪ್ರಶ್ನಿಸಿತ್ತು.

ಪಶ್ಚಿಮ ಬಂಗಾಳ ಪೊಲೀಸ್ ಇಲಾಖೆಯ ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳಾದ ಶ್ಯಾಮ್ ಸಿಂಗ್ ಹಾಗೂ ಜ್ಞಾನವಂತ್ ಸಿಂಗ್ ಈ.ಡಿ.ಯಿಂದ ಇದೇ ಪ್ರಕರಣಕ್ಕೆ ಸಂಬಂಧಿಸಿ ಕ್ರಮವಾಗಿ ಸೆಪ್ಟೆಂಬರ್ 8 ಹಾಗೂ 9 ರಂದು ಹಾಜರಾಗಲು ಸಮನ್ಸ್ ಪಡೆದಿದ್ದಾರೆ.