ಕ.ವಿ. ಸಂಘದ ಚುನಾವಣೆ: ಪಾಲಿಕೆ ಮಾಹಿಳಾ ಸಿಬ್ಬಂದಿಗೆ ಬೆದರಿಕೆ | Dharwad |
ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ತ್ರೈಮಾಸಿಕ ಚುನಾವಣೆ ಮತದಾನ ನಡೆಯುತ್ತಿದ್ದ ವೇಳೆಯಲ್ಲಿ, ಸಂಘದ ಮುಂಭಾಗದಲ್ಲಿ ಕೊರೊನಾ ರೂಲ್ಸ್ ಪರಿಶೀಲನೆಗೆ ತೆರಳಿದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿಗೆ ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ ವ್ಯಕ್ತಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ನಗರದ ಹೃದಯ ಭಾಗದಲ್ಲಿರುವ ಡಾ.ಬಿ ಆರ್ ಅಂಬೇಡ್ಕರ್ ಮೂರ್ತಿ ಬಳಿಯ ಕರ್ನಾಟಕ ವಿದ್ಯಾವರ್ಧಕ ಸಂಘದ ಕಚೇರಿ ಮುಂಭಾಗದಲ್ಲಿ ಇಂದು ಸಂಘದ ಚುನಾವಣೆ ಮತದಾನ ನಡೆಯುತ್ತಿದೆ. ಈ ವೇಳೆಯಲ್ಲಿ ಪಾಲಿಕೆ ಸಿಬ್ಬಂದಿಗಳು ಕೊರೊನಾ ಮಾರ್ಗ ಸೂಚಿಗಳಾದ ಸಮಸಜಿಕ ಅಂತರ ಹಾಗೂ ಮಾಸ್ಕ್ ಪರಿಶೀಲನೆಗೆ ಮುಂದಾಗಿದ್ದಾರೆ. ಆದರೆ ಈ ವೇಳೆ ಕ.ವಿ.ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡಿದ ಸಂಜೀವ್ ದುಮ್ಕನಾಳ ಸಂಘದ ಕಚೇರಿ ಮುಂಭಾಗದಲ್ಲಿ ಸರಿಯಾದ ಕ್ರಮದಲ್ಲಿ ಮಾಸ್ಕ್ ಹಾಕದೆ ಮತಯಾಚನೆ ಮಾಡುತ್ತಿದ್ದರಂತೆ. ಇದನ್ನು ನೋಡಿದ ಪಾಲಿಕೆಯ ಸಿಬ್ಬಂದಿಗಳು ದಂಡ ಹಾಕಲು ಮುಂದಾಗಿದ್ದು, ಇದರಿಂದ ಕೋಪಗೊಂಡ ಸಂಜೀವ ದುಮ್ಕನಾಳ ಪಾಲಿಕೆ ಮಹಿಳಾ ಸಿಬ್ಬಂದಿಗೆ ಏಕವಚನದಲ್ಲಿಯೇ ಮಾತನಾಡಿ, ಸಿಬ್ಬಂದಿಯ ಯೋಗ್ಯತೆ ಪ್ರಶ್ನೆ ಮಾಡಿರುವುದು ಸ್ಥಳೀಯರ ಕ್ಯಾಮೆರಾದಲ್ಲಿ ಸೆರೆಯಾಗಿದೆ.