ಎಲೆಮಲ್ಲಪ್ಪಶೆಟ್ಟಿ ಕೆರೆ ಕಲುಷಿತ ಮತ್ತು ಒತ್ತುವರಿ
ಎನ್ ಜಿ ಟಿ ಆದೇಶದ ಹಿನ್ನೆಲೆಯಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ ಎಲೆಮಲ್ಲಪ್ಪಶೆಟ್ಟಿ ಕೆರೆಯ ಕಲುಷಿತ ಸಂಬಂಧಿಸಿದಂತೆ ಕೆರೆ ಸಂರಕ್ಷಣೆ ಸಮಿತಿ ತಂಡದೊಂದಿಗೆ ಜಿಲ್ಲಾಧಿಕಾರಿ ಮಂಜುನಾಥ ಕೆರೆಯ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮವಾಗಿ ಬಡವಾಣೆಗಳನ್ನು ಮತ್ತು ಅಪಾರ್ಟ್ಮೆಂಟ್ ಗಳನ್ನು ನಿರ್ಮಾಣ ಮಾಡಿರುವುದನ್ನು ಪರಿಶೀಲನೆ ನಡೆಸಿದರು. ಕೆರೆಯ ಭಾಗದಲ್ಲಿ ಅಕ್ರಮವಾಗಿ ರಸ್ತೆಗಳನ್ನು ನಿರ್ಮಾಣ ಮಾಡಿರುವವರ ವಿರುದ್ದ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲು ತಹಶೀಲ್ದಾರ್ ಹಾಗೂ ಸರ್ವೆ ಅಧಿಕಾರಿಗಳಿಗೆ ತಿಳಿಸಿದರು. ಕೆರೆಯು ಬಿಬಿಎಂಪಿ ಮತ್ತು ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವುದರಿಂದ ಈ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ತ್ಯಾಜ್ಯ, ಕಸ, ಮಾಂಸದಂಗಡಿಗಳ ತ್ಯಾಜ್ಯ ವನ್ನು ಸುರಿಯುವವರ ಮೇಲೆ ಅಧಿಕಾರಿಗಳು ಮುಲಾಜಿಲ್ಲಾದೇ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ಇದೇ ವೇಳೆ ಸ್ಥಳಿಯರಿಂದ ಸಾಕಷ್ಟು ದೂರುಗಳು ಕೇಳಿಬಂದವು.ಕೆರೆಯ ನೀರನ್ನು ಎಸ್ ಟಿ ಪಿ ಇದ್ದರು ಯಾವುದೇ ಸಂಸ್ಕರಣೆ ಮಾಡದೆ ಕೆರೆಗೆ ನೀರು ಬಿಡಲಾಗುತ್ತದೆ. ರಾಜಕಾಲುವೆ ಪಕ್ಕದಲ್ಲಿ ಮನೆಗಳನ್ನು ಕಟ್ಟಿರುವ ನಿವಾಸಿಗಳು ಶೌಚಾಲಯದ ತ್ಯಾಜ್ಯವನ್ನೆಲ್ಲ ಕಾಲುವೆಗೆ ಬಿಡುವುದರಿಂದ ಕೆರೆ ನೀರು ದುರ್ವಾಸನೆಯಿಂದ ಕೂಡಿದೆ. ಇದರಿಂದ ಕೆರೆಯ ಸುತ್ತಮುತ್ತಲಿನ ನಿವಾಸಿಗಳಿಗೆ ನಾನಾ ರೋಗ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ಎಂದು ಸಮಸ್ಯೆಗಳನ್ನು ಹೇಳಿಕೊಂಡರು. ಇದಕ್ಕೆ ಸ್ಪಂಧಿಸಿದ ಜಿಲ್ಲಾಧಿಕಾರಿ ಮಂಜುನಾಥ, ಕೆರೆಯ ಪ್ರದೇಶವನ್ನು ಪರಿಶೀಲನೆ ನಡೆಸಿಲಾಗಿದೆ. ಕೆರೆಗಳ ಸಂರಕ್ಷಣೆ ನಮ್ಮ ಜವಾಬ್ದಾರಿ. ಈ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಸಹಯೋಗದೊಂದಿಗೆ ಕ್ರಿಯಾಯೋಜನೆ ಸಿದ್ದಪಡಿಸುವುದಾಗಿ ತಿಳಿಸಿದರು. ಯಾವುದೇ ಮುಲಾಜಿಲ್ಲದೆ ಕೆರೆಯ ಒತ್ತುವರಿ ತೆರವು ಕಾರ್ಯ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು. ಕೆರೆ ಪ್ರದೇಶವನ್ನು ಸಮೀಕ್ಷೆ ಮಾಡಿ ತಂತಿ ಬೆಲಿ ಅಳವಡಿಸಲಾಗುವುದು.ಕಸ ಸುರಿಯುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದೆಂ