ಯುವಕರ ನಡುವಿನ ವೈಮನಸ್ಸು ಕೊಲೆಯಲ್ಲಿ ಕೊನೆ? | Gundlupete |

ಗುಂಡ್ಲುಪೇಟೆ ತಾಲೂಕಿನ ಚಿಕ್ಕತುಪ್ಪುರು ಗ್ರಾಮದ ಯುವಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಇದ್ದ ವೈಮನಸ್ಸು ಒಬ್ಬನಿಗೆ ಚಾಕು ಇರಿತದಲ್ಲಿ ಕೊನೆಯಾಗಿದೆ. ಗ್ರಾಮದ ಕೌಶಿಕ್ ಚಾಕು ಇರಿತಕ್ಕೆ ಒಳಗಾದ ಯುವಕನಾಗಿದ್ದು, ಈತನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಜು ಚಾಕು ಇರಿದ ಯುವಕ. ವಿಚಾರ ತಿಳಿಯುತ್ತಿದ್ದಂತೆ ಆಸ್ಪತ್ರೆಗೆ ಆಗಮಿಸಿದ ಗುಂಡ್ಲುಪೇಟೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಿಳಿದಿದ್ದಾರೆ.