ಕರ್ನಾಟಕ ಚಿತ್ರಕಲಾ ಪರಿಷತ್ನಲ್ಲಿ ಆಟ್ರ್ಸ್ ಆ್ಯಂಡ್ ಕರಕುಶಲ ವಸ್ತುಗಳ ಪ್ರದರ್ಶನ
ಕರೋನಾ ಸಾಂಕ್ರಾಮಿಕ ಹಾಗೂ ಲಾಕ್ಡೌನ್ ನಿಂದ ಮನೆಯಲ್ಲಿಯೇ ಇದ್ದು ಬೋರ್ ಆಗಿರುವ ಜನರಿಗೆ ಉತ್ತಮ ಶಾಪಿಂಗ್ ನ ಅವಕಾಶ ದೊರಕಿಸಿಕೊಡುವ ನಿಟ್ಟಿನಲ್ಲಿ ಸೆಪ್ಟೆಂಬರ್ 17 ರಿಂದ 26 ರ ವರೆಗೆ ಕರ್ನಾಟಕ ಚಿತ್ರಕಲಾ ಪರಿಷತ್ ಆವರಣದಲ್ಲಿ ಬೆಳಿಗ್ಗೆ 11 ರಿಂದ ಸಂಜೆ 7 ಗಂಟೆಯವರೆಗೆ ಬೆಂಗಳೂರು ಆಟ್ರ್ಸ್ ಆ್ಯಂಡ್ ಕ್ರಾಫ್ಟ್, ಕರಕುಶಲ ವಸ್ತುಗಳ ಪ್ರದರ್ಶನ ಹಾಗೂ ಮಾರಾಟ ಮೇಳವನ್ನು ಆಯೋಜಿಸಲಾಗಿದೆ. ಕೋವಿಡ್ ಹರಡದಂತೆ ಎಲ್ಲಾ ರೀತಿಯ ಮುನ್ನೆಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಪ್ರವೇಶ ಉಚಿತವಾಗಿದೆ. ಈ ಮೇಳಕ್ಕೆ ಇಂದು ನಟಿ ಚಂದನ ರಾಘವೇಂದ್ರ ಚಾಲನೆ ನೀಡಿದರು. 80 ಕ್ಕೂ ಹೆಚ್ಚು ಅಂಗಡಿಗಳಿದ್ದು ದೇಶದ ಎಲ್ಲಾ ಭಾಗಗಳಿಂದ ಆಗಮಿಸಿರುವ ಕಲಾವಿದರುಗಳು ತಮ್ಮ ಕಲೆಯನ್ನು ಪ್ರದರ್ಶನಕ್ಕೆ ಇಡಲಿದ್ದಾರೆ. ಮಣ್ಣು, ಕಲ್ಲು, ಮರ ಹಾಗೂ ಲೋಹಗಳನ್ನು ಬಳಸಿ ತಯಾರಿಸಿರುವ ಗೊಂಬೆಗಳು ಪ್ರಮುಖ ಆಕರ್ಷಣೆಯಾಗಿರಲಿವೆ.