ಮರಳಿನ ಲಾರಿಗೆ ಐವರು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ

ಮರಳಿನ ಲಾರಿಗೆ ಐವರು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆಗೈದು ಹಣ ದೋಚಿಕೊಂಡು ಪರಾರಿಯಾಗಿರುವ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಚಿಕ್ಕಬೇನೂರ ಗ್ರಾಮದಲ್ಲಿ ನಡೆದಿದೆ. ದುಷ್ಕರ್ಮಿಗಳು ಸುರೇಶ ಪಾರೆಗೆ ಜಂಬೆದಿಂದ ಹಲ್ಲೆಗೈದು ಗಾಯಗೊಳಿಸಿದ್ದಾರೆ. ಇನ್ನು ಸಚಿನ ಮೇಲಿನಮನೆ ಹಾಗೂ ಪರಶುರಾಮ ಮೇಲಿನಮನೆ ಸೇರಿದಂತೆ ಐವರ ಮೇಲೆ ಹಲ್ಲೆಗೈದು 50 ಸಾವಿರ ನಗದು ದೋಚಿಕೊಂಡು ಪರಾರಿಯಾಗಿದ್ದಾರೆ. ಗಾಯಗೊಂಡವರನ್ನು ಇಂಡಿ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಕುರಿತು ಇಂಡಿ ಗ್ರಾಮೀಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.