ಇಂಗ್ಲಿಷ್ ಶಿಕ್ಷಕರ ಹುದ್ದೆ ಭರ್ತಿ ಮಾಡಿ

ಗದಗ ತಾಲೂಕು ಕದಡಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಮೂರು ವರ್ಷದಿಂದ ಖಾಲಿ ಇರುವ ಇಂಗ್ಲಿಷ್ ಶಿಕ್ಷಕರ ಹುದ್ದೆ ಭರ್ತಿ ಮಾಡ್ಬೇಕು ಎಂದು ಶಾಲೆ ಕೊಠಡಿಗಳಿಗೆ ಬೀಗ ಜಡಿದ ಪೋಷಕರು ಏಕಾಏಕಿ ಮಕ್ಕಳೊಂದಿಗೆ ಪ್ರತಿಭಟನೆ ನಡೆಸಿ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಸಂಬAಧಪಟ್ಟ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ರು. ಶಾಲೆಯಲ್ಲಿ ಇಂಗ್ಲಿಷ್ ಟೀಚರ್ ಇಲ್ದೆ ಮಕ್ಕಳ ಕಲಿಕಾ ಸಾಮರ್ಥ್ಯ ಕುಂಠಿತವಾಗಿದೆ. ಮಕ್ಕಳು ಇಂಗ್ಲಿಷ್ ಕಲಿಕೆಯಲ್ಲಿ ಹಿಂದೆ ಬೀಳುವಂತಾಗಿದೆ. ಹೀಗಾಗಿ ಜಿಲ್ಲಾಡಳಿತ ಈ ಬಗ್ಗೆ ಗಮನ ಹರಿಸಿ ಕೂಡಲೇ ಶಿಕ್ಷಕರ ನೇಮಕ ಮಾಡಬೇಕು ಅಂತಾ ಆಗ್ರಹಿಸಿದರು.