ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ಪ್ರಥಮ ಮಹಿಳೆ ಕಿತ್ತೂರು ಚೆನ್ನಮ್ಮ ಸಿ ಎಂ ಬಸವರಾಜ್ ಬೊಮ್ಮಾಯಿ | Basavaraj Bommai |

ಸ್ವಾತಂತ್ರ್ಯ ಹೋರಾಟದ ಕಿಡಿ ಹೊತ್ತಿಸಿದ ಪ್ರಥಮ ಮಹಿಳೆ ವೀರರಾಣಿ ಕಿತ್ತೂರು ಚನ್ನಮ್ಮ ಮೂರ್ತಿ ಶಿಗ್ಗಾಂವಿ ಪಟ್ಟಣದಲ್ಲಿ ಪ್ರತಿಷ್ಠಾಪನೆಗೊಂಡಿದ್ದು ಸಂತೋಷ ಹಾಗೂ ಅಭಿಮಾನದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಶಿಗ್ಗಾಂವ ಪಟ್ಟಣದಲ್ಲಿ ಚನ್ನಮ್ಮ ಮೂರ್ತಿಗೆ ಬುಧವಾರ ಮಾಲಾರ್ಪಣೆ ಮಾಡಿ ಮಾತನಾಡಿದರು. ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ.ಪಾಟೀಲ, ಬಸವರಾಜ ಹೊರಟ್ಟಿ, ವೀರುಪಾಕ್ಷಪ್ಪ ಬಳ್ಳಾರಿ, ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಉಪಾಧ್ಯಕ್ಷ ಮಂಜುನಾಥ ಬ್ಯಾಹಟ್ಟಿ, ಪಂಚಮಸಾಲಿ ಸಮಾಜದ ತಾಲೂಕಾ ಅಧ್ಯಕ್ಷ ಶಿವಾನಂದ ಬಾಗೂರ, ಸಿ.ವಿ.ಮತ್ತಿಗಟ್ಟಿ, ಸಿದ್ದಣ್ಣ ಮೊರಬದ ಉಪಸ್ಥಿತರಿದ್ದರು.