ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ
ಕನ್ನಡ ಚಿತ್ರರಂಗದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನದ ಅಂಗವಾಗಿ ಕೆಆರ್ ಪುರಂನ ಶ್ರೀ ವೆಂಕಟೇಶ್ವರ ಚಿತ್ರಮಂದಿರದ ಸಿಬ್ಬಂದಿ ಹಾಗೂ ಕನ್ನಡಪರ ಹೋರಾಟಗಾರರು ಅಪ್ಪು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಶ್ರದ್ದಾಂಜಲಿ ಅರ್ಪಿಸಿದರು. ಈ ವೇಳೆ ಮಾತನಾಡಿದ ಚಿತ್ರಮಂದಿರದ ಮಾಲೀಕ ಜಯರಾಮರೆಡ್ಡಿ,ದೇವರು ಪುನೀತ್ ರಾಜ್ ಕುಮಾರ್ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದರು.