ಮೈಸೂರು ಚಾಮುಂಡಿ ಬೆಟ್ಟಕ್ಕೆ ಮಾಜಿ ಸಿ.ಎಂ ಕುಟುಂಬ ಸಮೇತ ಭೇಟಿ
ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಮಾಜಿ ಸಿ.ಎಂ ಕುಮಾರಸ್ವಾಮಿ ಪತ್ನಿ ಅನಿತಾರೊಂದಿಗೆ ಭೇಟಿ ನೀಡಿದರು. ದಸರಾ ನವರಾತ್ರಿ ಉತ್ಸವ ಹಿನ್ನೆಲೆಯಲ್ಲಿ ಭೇಟಿ ನೀಡಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದರು. ಈ ವೇಳೆ ಕುಮಾರಸ್ವಾಮಿ ದಂಪತಿಗಳು ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಮಾಡಿದರು. ಮೈಸೂರಿನ ಹೊರ ವಲಯದ ಬೆಳವಾಡಿಯಲ್ಲಿ ನಿರ್ಮಿಸಲಾದ ಶ್ರೀ ಚಾಮುಂಡೇಶ್ವರಿ ದೇವಾಲಯದ ಉದ್ಘಾಟನೆ ಕಾರ್ಯಕ್ರಮಕ್ಕೆ ಅವರು ಆಗಮಿಸಿದ್ದರು.