ಬೆಳೆ ಖರೀದಿ ಕೇಂದ್ರ ತೆರೆಯಲು ಮಾಜಿ ಶಾಸಕ ಎನ್.ಎಚ್.ಕೋನರೆಡ್ಡಿ ಆಗ್ರಹ | Dharwad |
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ರೈತರು ಬೆಳೆದ ಹೆಸರು, ಖರೀದಿಸಲು ಬೆಂಬಲ ಬೆಲೆ ಯೋಜನೆಯಲ್ಲಿ ಖರೀದಿ ಕೇಂದ್ರ ತೆರೆಯಬೇಕು ಎಂದು ಮಾಜಿ ಶಾಸಕ ಎನ್. ಎಚ್. ಕೋನರೆಡ್ಡಿ ಸರ್ಕಾರಕ್ಕೆ ಆಗ್ರಹಿಸಿದರು. ಧಾರವಾಡದಲ್ಲಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದ ಬಳಿಕ, ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು. ರೈತರ ಅನುಕೂಲಕ್ಕಾಗಿ ಸರ್ಕಾರ ಬೆಂಬಲ ಬೆಲೆ ಯೋಜನೆಯಲ್ಲಿ ಹೆಸರು ಖರೀದಿ ಕೇಂದ್ರ ಪ್ರಾರಂಬಿಸಬೇಕು. ರೈತರಿಂದ ಪ್ರತಿ ೩೦, ಕ್ವಿಂಟಲ್ ಹೆಸರು ಬೆಳೆ ಖರೀದಿಸಬೇಕು. ಯೂರಿಯ ಗೊಬ್ಬರ ಸಿಗದೆ ತೊಂದರೆಯಾಗಿದ್ದು, ರೈತರಿಗೆ ಯೂರಿಯ ಗೊಬ್ಬರ ಪೂರೈಸುವ ಕೆಲಸ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದರು....