ಬೀದರನ ಘೋಡವಾಡಿ ಗ್ರಾಮದ ಕೆರೆಯಲ್ಲಿ ಈಜಲು ಹೋದ ನಾಲ್ವರು ಯುವಕರು ನೀರು ಪಾಲು
ಹೈದ್ರಾಬಾದ್ ಬೊರಬಂಡಾ ನಿವಾಸಿಗಳಾದ ಸೈಯದ್ ಅಕ್ಬರ್ ಸೈಯದ್ ಉಸ್ಮಾನ್ (17), ಮಹಮದ್ ಜುಲೇದ್ ಖಾನ್ (19), ಮಹಮದ್ ಫಾದಖಾನ್ ಸಲೀಂ ಖಾನ್ (18) ಮತ್ತು ಸೈಯದ್ ಜುನೇದ್ ಸೈಯದ್ ಖಾಲೆದ್ (15) ಮೃತ ದುರ್ದೈವಿಗಳೆಂದು ತಿಳಿದುಬಂದಿದೆ. ನಾಲ್ವರ ಪೈಕಿ ಸೈಯದ್ ಅಕ್ಬರ್ ಶವ ಪತ್ತೆಯಾಗಿದ್ದು, ಉಳಿದವರ ಶವಗಳಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.ಘಟನಾ ಸ್ಥಳಕ್ಕೆ ಹುಮನಾಬಾದ್ ಪೊಲೀಸ್ ಠಾಣೆಯ ಪಿಎಸ್ಐ ರವಿಕುಮಾರ್ ನಾಯ್ಕೋಡಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವಗಳ ಪತ್ತೆಗಾಗಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸುತ್ತಿದ್ದಾರೆ. ಈ ಅವಘಡದ ಮಾಹಿತಿ ಹಬ್ಬುತ್ತಿದ್ದಂತೆ ಕೆರೆಯ ಸುತ್ತ ನೂರಾರು ಜನ ಜಮಾಯಿಸಿದ್ದಾರೆ.