ಉಚಿತ ಕಣ್ಣಿನ ತಪಾಸಣಾ ಶಿಬಿರ
ಸತ್ಯ ಸಾಯಿ ಸೇವಾ ಸಮಿತಿಯು ಅಂತ್ಯೋದಯ ಪರಿಕಲ್ಪನೆಯಿಂದ ಬಡವರ ಸೇವೆ ಮಾಡುತ್ತಿದೆ. ದೃಷ್ಟಿ ಇಲ್ಲದವರಿಗೆ ದೃಷ್ಟಿ ನೀಡಿ ಕಟ್ಟಕಡೆಯ ವ್ಯಕ್ತಿಯನ್ನು ಗುರುತಿಸಿ ಅವರಿಗೆ ತಮ್ಮ ಸೌಲಭ್ಯಗಳನ್ನು ಮುಟ್ಟಿಸುವ ಕಾರ್ಯ ಮಾಡುತ್ತಿರುವದು ಶ್ಲಾಘನೀಯವಾಗಿದೆ ಎಂದು ತಾಲೂಕಾ ಬಿಜೆಪಿ ಅಧ್ಯಕ್ಷ ಶಿವಾನಂದ ಮ್ಯಾಗೇರಿ ಹೇಳಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ರೋ ಸುಬ್ರಾವ್ ಕಾಸರಗೊಡ ಮೆಮೋರಿಯಲ್ ರೋಟರಿ ಚಾರಿಟೇಬಲ್ ಆಸ್ಪತ್ರೆ ಶಿರಸಿ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾವೇರಿ, ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣ ಸೊಸೈಟಿ ಹಾವೇರಿ, ಸಾರ್ವಜನಿಕ ಆಸ್ಪತ್ರೆ ಶಿಗ್ಗಾಂವಿ, ಸತ್ಯ ಸಾಯಿ ಸೇವಾ ಸಂಸ್ಥೆ ಹಾವೇರಿ, ಹಾಗೂ ಕರ್ನಾಟಕ ಪತ್ರಕರ್ತರ ಸಂಘ ಶಿಗ್ಗಾಂವಿ ಇವರಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಉಚಿತ ಕಣ್ಣಿನ ಪೊರೆ ತಪಾಸಣಾ ಹಾಗೂ ಶಸ್ತ್ರಚಿಕಿತ್ಸಾ ಶಿಬಿರವನ್ನು ಉದ್ದೇಶಿಸಿ ಮಾತನಾಡಿದರು. ಶಿಬಿರದಲ್ಲಿ ಈ ಸಂದರ್ಭದಲ್ಲಿ ಕಣ್ಣಿನ ತಜ್ಞ ರಾದ ಡಾ.ಎ.ಜಿ.ವಸ್ತ್ರದ, ಡಾ.ರೋಷನ್, ಅನುರಾದ ಪಾಟೀಲ, ಡಾ.ಗೀರಿಶ ಮೇಟಿ, ಸತ್ಯ ಸಾಯಿ ಸೇವಾ ಸಮಿತಿಯ ಸದಸ್ಯರಾದ ಉದಯಶಂಕರ್ ಹೊಸಮನಿ, ಕರ್ನಾಟಕ ಪತ್ರಕರ್ತರ ಸಂಘದ ಅಧ್ಯಕ್ಷ ವಿಶ್ವನಾಥ ಬಂಡಿವಡ್ಡರ, ಸೇರಿದಂತೆ ಅನೇಕರು ಉಪಸ್ಥಿತರಿದ್ದರು