ಗ್ಯಾಂಗ್ ರೇಪ್ ಪ್ರಕರಣ: ಸ್ಥಳಕ್ಕೆ ಮಹಿಳಾ ಆಯೋಗ ಅಧ್ಯಕ್ಷೆ ಭೇಟಿ | Mysore |
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಗ್ಯಾಂಗ್ ರೇಪ್ ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಮಹಿಳಾ ಆಯೋಗದ ಅಧ್ಯಕ್ಷೆ ಪ್ರಮಿಳಾ ನಾಯ್ಡು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ, ಇದೊಂದು ಹೇಯ ಕೃತ್ಯ. ಇಂತಹ ಕೃತ್ಯಗಳು ನಡೆಯಬಾರದು. ಸಂತ್ರಸ್ಥೆಯ ಜೊತೆ ಈಗಾಗಲೇ ಮಾತನಾಡಿದ್ದೇನೆ. ಮಹಿಳಾ ಆಯೋಗದಲ್ಲಿ ಸುಮೋಟೊ ಕೇಸ್ ದಾಖಲಾಗಿದೆ. ಆಯೋಗ ಈ ಪ್ರಕರಣವನ್ನು ಗಂಭೀರವಾಗಿ ಪರಿಣಗಣಿಸಿದೆ. ಇನ್ನು ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಸಿಎಂ ಕೂಡ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು. ಸದ್ಯ ಪೆÇಲೀಸರಿಗೆ ಸ್ಥಳದಲ್ಲಿ 34 ಸಾಕ್ಷಿ ಸಿಕ್ಕಿದೆ, ಈ ಬಗ್ಗೆ ನನಗೆ ಮಾಹಿತಿ ನೀಡಿದ್ದು, ಆರೋಪಿಗಳ ಸುಳಿವು ಕೂಡ ದೊರೆತಿದೆ ಎಂದು ಮಾಹಿತಿ ನೀಡಿದರು.