ಗಂಗೆಭಾವಿಯ ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯಿಂದ ಗೋ ಶಾಲೆ ಲೋಕಾರ್ಪಣೆ ಕಾರ್ಯಕ್ರಮ
ಗಂಗೆಭಾವಿಯ ಸಿ.ಬಿ.ಯಲಿಗಾರ ಸೇವಾ ಸಂಸ್ಥೆಯ ವತಿಯಿಂದ ಗೋ ಶಾಲೆಯ ಉದ್ಘಾಟನೆಯನ್ನು ಶ್ರೀ ಕೊಲ್ಲಾಪುರದ ಕನ್ಹೇರಿಮಠದ ಅದೃಶ್ಯ ಕಾಡಸಿದ್ದೇಶ್ವರ ಮಹಾಸ್ವಾಮಿಗಳು ನೇರವೇರಿಸಿದರು. ಗೋಶಾಲೆಯನ್ನು ಉದ್ಘಾಟಿಸಿ ಮಾತನಾಡಿದ ಶ್ರೀ ಗಳು ಗೋಮಾತೆಯಲ್ಲಿ ಮುಕ್ಕೋಟಿ ದೇವರನ್ನು ನಾವು ಕಾಣುತ್ತೇವೆ. ಆದ್ದರಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಭಕ್ತರು ಗೋಶಾಲೆಗಳನ್ನು ತೆರೆದು ಅವುಗಳ ರಕ್ಷಣೆಗೆ ಮುಂದಾಗ ಬೇಕಿದೆ ಎಂದು ಕರೆ ನೀಡಿದರು ಈ ಕಾರ್ಯಕ್ರಮದ ಕೇಂದ್ರ ಬಿಂದು ವಾಗಿದ್ದ ಶ್ರೀ ಶಶಿಧರ ಯಲಿಗಾರ ಮಾತನಾಡಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಗೋಶಾಲೆ ನಿರ್ಮಿಸುವುದರ ಜೊತೆಗೆ ಗೋ ರಕ್ಷಣೆ ಮತ್ತು ಅವುಗಳ ನಿರ್ವಹಣೆ ಮಾಡುವುದಾಗಿ ಸಂಕಲ್ಪ ಮಾಡಿದರು ಕಾರ್ಯಕ್ರಮದ ಸಾನಿಧ್ಯವನ್ನು ಬಂಕಾಪುರ ಅರಳೆಲೆ ಹಿರೇಮಠದ ರೇವಣಸಿದ್ದೇಶ್ವರ ಶಿವಾಚಾರ್ಯ ಮಹಾಸ್ವಾಮೀಜಿ, ಅಧ್ಯಕ್ಷತೆಯನ್ನು ಸೇವಾ ಸಂಸ್ಥೆಯ ಅಧ್ಯಕ್ಷರಾದ ಶಶಿಧರ ಚ. ಯಲಿಗಾರ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಮಾದಾಪುರ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ, ಸವಣೂರು ಕಲ್ಮಠದ ಚನ್ನಬಸವ ಮಹಾಸ್ವಾಮೀಜಿ, ಶಿಗ್ಗಾಂವಿನ ಸಂಗನಬಸವ ಮಹಾಸ್ವಾಮೀಜಿ, ಸವಣೂರಿನ ಕಲ್ಮಠದ ಶ್ರೀ ಮಹಾಂತ ಮಹಾಸ್ವಾಮಿಗಳು, ಹತ್ತಿಮತ್ತೂರಿನ ವಿರಕ್ತ ಮಠದ ಶ್ರೀ ನಿಜಗುಣ ಶಿವಯೋಗಿ ಮಹಾಸ್ವಾಮಿಗಳು, ಸುಕ್ಷೇತ್ರ ಮಂತ್ರವಾಡಿಯ ಸಿದ್ದರಾಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು, ಹಿರೇಮಣಕಟ್ಟಿಯ ಮುರಘೇಂದ್ರ ಮಠದ ವಿಶ್ವರಾದ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಹೂವಿನ ಶಿಗ್ಲಿಯ ವಿರಕ್ತ ಮಠದ ಚನ್ನವೀರ ಮಹಾಸ್ವಾಮಿಗಳು, ಸದಾಶಿವ ಪೇಟೆಯ ಗದಿಗೇಶ್ವರ ಮಹಾಸ್ವಾಮಿಗಳು ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಶ್ರೀ ಅಕ್ಷಯ ಜೋಶಿ ಹಾಗೂ ಅವರ ತಂಡದಿಂದ ಹಿಂದೂಸ್ತಾನಿ ಕೊಳಲು ವಾದಕ ಸಂಗೀತ ಕಾರ್ಯಕ್ರಮ ಎಲ್ಲರನ್ನು ರಂಜಿಸಿತು. ರೈತಧ್ವನಿ ಚಾನಲ್ ಸಂಪಾದಕ ಬಸವರಾಜ್ ಕುರಗೋಡಿ, ನಾಗರಾಜ ಸೂರಗೊಂಡ, ಸೇರಿದಂತೆ ಹಲವರು ಉಪಸ್ಥಿತರಿದ್ದರು.