ಚಿನ್ನದ ಸರ ಕಿತ್ತೊಯ್ದ ಕದೀಮರು | Doddaballapur |

ದೊಡ್ಡಬಳ್ಳಾಪುರ ನಗರದಲ್ಲಿ ದನ ಮೇಯಿಸುತ್ತಿದ್ದ ಮಹಿಳೆಯ ಗಮನ ಬೇರೆಡೆ ಸೆಳೆದು ಆಕೆಯ ಕತ್ತಿನಲ್ಲಿದ್ದ ಚಿನ್ನದ ಸರ ಕಿತ್ತುಕೊಂಡು ಹೋಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಅರೆಹಳ್ಳಿ ಗುಡ್ಡದಹಳ್ಳಿ ನಿವಾಸಿ ಗೌರಮ್ಮ ಸರಕಳೆದುಕೊಂಡ ಮಹಿಳೆ. ಇವರು ಆಗಸ್ಟ್ 31 ರಂದು ಮಧ್ಯಾಹ್ನ ಜಗದೀಶ್ ರೆಡ್ಡಿ ಲೇಔಟ್ನ ಪ್ರದೇಶದಲ್ಲಿ ದನಗಳನ್ನು ಮೇಯಿಸುತ್ತಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ಅಪರಿಚಿತ ಯುವಕನೊಬ್ಬ ಗೌರಮ್ಮ ಅವರನ್ನು ಮಾತನಾಡಿಸಿದ್ದಾನೆ. ಮಾತುಕತೆ ಮಧ್ಯೆಯೇ ಯುವಕ, ಗೌರಮ್ಮ ಅವರ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾನೆ ಎಂದು ಪೊಲೀಸ್ರು ತಿಳಿಸಿದ್ದಾರೆ. ಘಟನೆಯಿಂದ ಆಘಾತಗೊಂಡ ಗೌರಮ್ಮ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸ್ರು ತನಿಖೆ ಮುಂದುವರಿಸಿದ್ದು ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ.