ಕೋವಿಡ್ ಭ್ರಷ್ಟಾಚಾರದಲ್ಲಿ ಸರ್ಕಾರ ನಂಬರ್ ಒನ್: ಶಿವಕುಮಾರ್

ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ಹೆಸರಿನಲ್ಲಿ ನಡೆದ ಭ್ರಷ್ಟಾಚಾರದಲ್ಲಿ ರಾಜ್ಯ ಸರ್ಕಾರ ದೇಶಕ್ಕೆ ನಂಬರ್ ಒನ್ ಸ್ಥಾನದಲ್ಲಿದೆ. ಅದೇ ಕಾರಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಲಾಯಿತು. ಕಣ್ಣೀರು ಹಾಕುತ್ತಾ ಹುದ್ದೆ ತ್ಯಜಿಸಿದ್ದು ಏಕೆ ಎಂದು ಯಡಿಯೂರಪ್ಪ ಅವರೇ ಹೇಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಅವರು, 'ಚಿಕಿತ್ಸೆಗೆ ಕ್ಯೂ, ಆಂಬುಲೆನ್ಸ್‌ಗೆ ಕ್ಯೂ, ಔಷಧ ಪಡೆಯಲು ಕ್ಯೂ ಕೊನೆಗೆ ಅಂತ್ಯಸಂಸ್ಕಾರಕ್ಕೂ ಕ್ಯೂ ನಿಲ್ಲಿಸಿದರು. ಇದು ಕ್ಯೂ ಸರ್ಕಾರ ಎಂದು ಟೀಕಿಸಿದರು.
ಕೇಂದ್ರ ಸರ್ಕಾರವು ಕೋವಿಡ್ ನಿರ್ವಹಣೆಯಲ್ಲಿ ವಿಫಲವಾ ಗಿದ್ದು, ಇತ್ತೀಚೆಗೆ ನಡೆದ ಸಂಪುಟ ವಿಸ್ತರಣೆ ವೇಳೆ ಆರೋಗ್ಯ ಸಚಿವರನ್ನು ಮನೆಗೆ ಕಳುಹಿಸಿದರು ಎಂದರು.
ಇದಕ್ಕೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, 'ಡಿ.ಕೆ. ಶಿವಕುಮಾರ ಭ್ರಷ್ಟಾಚಾರದ ಬಗ್ಗೆ ಮಾತನಾಡುತ್ತಾರೆ ಅಂದರೆ, ಭೂತದ ಬಾಯಲ್ಲಿ ಭಗವದ್ಗೀತೆ ಬಂದಂತೆ' ಎಂದರು.