ಶಾಲೆ ತೆರಯುವುದಕ್ಕೆ ಸರ್ಕಾರ ಸಂಪೂರ್ಣ ಸಿದ್ದ | Mysore |
ಶಾಲೆ ತೆರೆಯುವುದಕ್ಕೆ ಸರ್ಕಾರ ಎಲ್ಲ ರೀತಿಯಲ್ಲೂ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಈ ಕುರಿತು ತಜ್ಞರ ಸಲಹೆಗಳನ್ನು ಸಹ ಪಡೆಯಲಾಗಿದೆ ಎಂದು ಶಿಕ್ಷಣ ಸಚಿವ ನಾಗೇಶ್ ಹೇಳಿದರು. 18 ವರ್ಷ ಮೇಲ್ಪಟ್ಟವರೆಗೆ ಈಗಾಗಲೇ ವ್ಯಾಕ್ಸಿನೇಷನ್ ಕೂಡ ಆಗಿದ್ದು, ಮುಂದಿನ ದಿನಗಳಲ್ಲಿ ಯಾವುದೇ ರೀತಿಯಲ್ಲೂ ತೊಂದರೆಯಾಗುವುದಿಲ್ಲ ಎಂದು ಭರವಸೆ ನೀಡಿದರು. ಶಾಲೆ ತೆರೆಯುವ ಬಗ್ಗೆ ಸಾರ್ವಜನಿಕ ವಲಯದಲ್ಲಿ ಉತ್ತಮ ಸ್ಪಂದನೆ ಸಿಗಲಿದೆ ಎಂದಬ ವಿಶ್ವಾಸವಿದೆ. ಈ ವಿಚಾರದಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಕೆಲವರು ಮಾತ್ರ ನ್ಯಾಯಾಲದ ಮೊರೆ ಹೋಗಿದ್ದಾರೆ ಎಂದು ತಿಳಿಸಿದರು.