ಹಾನಗಲ್ ಕುಮಾರೇಶ್ವರ ಮಠದಲ್ಲಿ ವಿನಯ್ ಕುಲಕರ್ಣಿಗೆ ಭರ್ಜರಿ ಸ್ವಾಗತ

ಹಾನಗಲ್ ಉಪಚುನಾವಣೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶ್ರೀನಿವಾಸ್ ಮಾನೆ ಅವರ ಪರ ಪ್ರಚಾರ ಕೈಗೊಳ್ಳಲು ಆಗಮಿಸಿದ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರಿಗೆ ಹಾನಗಲ್ ಕುಮಾರೇಶ್ವರ ಮಠದಲ್ಲಿ ಭರ್ಜರಿ ಸ್ವಾಗತ ಕೋರಲಾಯಿತು. ಹಾನಗಲ್ಲಿನ ಶ್ರೀ ಕುಮಾರೇಶ್ವರ ಸನ್ನಿಧಾನಕ್ಕೆ ಆಗಮಿಸಿ ಕುಮಾರೇಶ್ವರ ದರ್ಶನ ಪಡೆದು ಅನಂತರ ಮಠದ ಆವರಣದಲ್ಲಿ ಸ್ಥಾಪಿಸಲಾಗಿರುವ ಕಿತ್ತೂರು ರಾಣಿ ಚೆನ್ನಮ್ಮನವರ ಹಾಗೂ ಶ್ರೀಬಸವೇಶ್ವರರ ಮೂರ್ತಿಗಳಿಗೆ ಮಾಲಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.