ಮಳೆಯಿಂದ ಬೆಳೆ ಕಳೆದುಕೊಂಡ ರೈತರಿಗೆ ತಕ್ಷಣ ಪರಿಹಾರ ನೀಡಿ : ಹೆಚ್‌ಡಿಕೆ

ಬೆಂಗಳೂರು,ನ.19- ಅತಿಯಾದ ಮಳೆಯಿಂದ ಬೆಳೆ ಹಾನಿಗೀಡಾಗಿರುವ ರೈತರಿಗೆ ತಕ್ಷಣವೇ ಸರ್ಕಾರ ಹಣ ಬಿಡುಗಡೆ ಮಾಡಿ ತಾತ್ಕಾಲಿಕ ಪರಿಹಾರ ನೀಡಬೇಕೆಂದು ಮಾಜಿ ಎಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರಿಹಾರಕ್ಕಾಗಿ ಕೇಂದ್ರದ ಮುಂದೆ ಮನವಿ ಪತ್ರ ಸಲ್ಲಿಸುವ ಮುನ್ನ ಸಂಕಷ್ಟದಲ್ಲಿರುವ ರೈತರ ನೆರವಿಗೆ ಧಾವಿಸಬೇಕು. ಜಿಲ್ಲಾ ಉಸ್ತುವಾರಿ ಸಚಿವರು, ಉಸ್ತುವಾರಿ ಕಾರ್ಯದರ್ಶಿಗಳು ಸ್ಥಳ ಪರಿಶೀಲನೆ ಮಾಡಿ ಸರ್ಕಾರಕ್ಕೆ ಮಾಹಿತಿ ನೀಡಬೇಕು ಹಾಗೂ ಸ್ಥಳದಲ್ಲೇ ಪರಿಹಾರವನ್ನು ಒದಗಿಸಬೇಕು ಎಂದರು.
ಸುಮಾರು 7 ಲಕ್ಷ ಹೆಕ್ಟೇರ್ ಭೂಮಿಯಲ್ಲಿ ಬೆಳೆದಿದ್ದಂತಹ ಭತ್ತ, ರಾಗಿ, ಅಡಿಕೆ, ಕಾಫಿ ಮೊದಲಾದ ಬೆಳೆಗಳು ನೆಲಕಚ್ಚಿವೆ. ಇದರಿಂದ ಆಹಾರ ಉತ್ಪಾದನೆ, ಮೇವಿನ ಉತ್ಪಾದನೆ ಮೇಲೂ ಗಂಭೀರ ಪರಿಣಾಮ ಬೀರಿ ಮುಂದೆ ಸಮಸ್ಯೆ ಉಂಟಾಗಲಿದೆ ಎಂದು ಎಚ್ಚರಿಸಿದರು.