ಕರ್ನಾಟಕ ವಿದ್ಯಾವರ್ಧಕ ಸಂಘದ ಚುನಾವಣೆಗೆ ನೋಟಿಸ್ ನೀಡಿದ ಹೈಕೋರ್ಟ್
ಕರ್ನಾಟಕ ವಿದ್ಯಾವರ್ಧಕ ಸಂಘ ಚುನಾವಣೆ ಹುರುಪಿನಲ್ಲಿದ್ದರೆ, ಅದಕ್ಕೆ ಧಾರವಾಡ ಹೈಕೋರ್ಟ್ ಶಾಕ್ ಕೊಟ್ಟಿದೆ. ಹೌದು ನವೆಂಬರ್ 28ಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಕಾರ್ಯಕಾರಿ ಮಂಡಳಿಗೆ ಚುನಾವಣೆ ಜರುಗಬೇಕಾಗಿದೆ.. ಆದ್ರೆ 2003 ರಿಂದ ಇಲ್ಲಿಯವರೆಗೂ ಕರ್ನಾಟಕ ವಿದ್ಯಾವರ್ಧಕ ಸಂಘದ ಯಾವುದೇ ಕಾರ್ಯಚಟುವಟಿಕೆಗಳು ನೋಂದಣಿ ನವೀಕರಣ ಆಗದೇ ಇರುವುದರಿಂದ ಸದ್ಯ ನಡೆಸುತ್ತಿರುವ ಚುನಾವಣೆ ಕಾನೂನು ಬಾಹಿರವಾಗಿದೆ. ಆದ್ದರಿಂದ ಚುನಾವಣೆಗೆ ತಡೆಯಾಜ್ಞೆ ನೀಡಬೇಕು ಎಂದು ವಕೀಲರೂ ಆಗಿರುವ ಸಾಮಾಜಿಕ ಹೋರಾಟಗಾರ ಮಹಾದೇವ ದೊಡಮನಿ ಅವರು ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, 2003 ರಿಂದ ಇಲ್ಲಿಯವರೆಗೂ ಸಂಘದ ಅಗತ್ಯ ದಾಖಲೆಗಳನ್ನು ಮೂರು ದಿನಗಳ ಒಳಗಾಗಿ ಸಲ್ಲಿಸುವಂತೆ ಸೂಚನೆ ನೀಡಿ ನೋಟಿಸ್ ಜಾರಿ ಮಾಡಿದೆ.