ಭವಾನಿಪುರದಲ್ಲಿ ಹೈ ವೋಲ್ಟೆಜ್ ಸ್ಪರ್ಧೆ: ದೀದಿ ಎದುರು ಬಿಜೆಪಿಯಿಂದ ವಕೀಲೆ ಕಣಕ್ಕೆ?

ಕೋಲ್ಕತ್ತಾ, ಸೆಪ್ಟೆಂಬರ್, 09: ಪಶ್ಚಿಮ ಬಂಗಾಳದಲ್ಲಿ ಭವಾನಿಪುರ ಉಪಚುನಾವಣೆಯಲ್ಲಿ ಟಿಎಂಸಿ ಯಿಂದ ನಿರೀಕ್ಷೆಯಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕಣಕ್ಕೆ ಇಳಿದಿದ್ದಾರೆ. ಕಾಂಗ್ರೆಸ್ ಮಾತ್ರ ತನ್ನ ಯಾವುದೇ ಅಭ್ಯರ್ಥಿಯನ್ನು ಟಿಎಂಸಿ ಎದುರು ಸ್ಪರ್ಧೆಗೆ ಇಳಿಸಲಾರೆವು ಎಂದು ಹೇಳಿದೆ. ಆದರೆ ಬಿಜೆಪಿ ಈಗ ಮಮತಾ ಎದುರು ವಕೀಲೆ ಪ್ರಿಯಾಂಕ ಟಿಬ್ರೆವಾಲ್‌ರನ್ನು ತಮ್ಮ ಅಭ್ಯರ್ಥಿಯಾಗಿ ಆರಿಸಿಕೊಳ್ಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳದಲ್ಲಿ ಹೈ ವೋಲ್ಟೇಜ್ ಸ್ಪರ್ಧೆ ನಡೆಯಲಿದ್ದು, ಮುಖ್ಯಮಂತ್ರಿ ಕುರ್ಚಿಯನ್ನು ತಮ್ಮ ಕೈಯಲ್ಲೇ ಉಳಿಸಿಕೊಳ್ಳಲು ಈ ಚುನಾವಣೆಯಲ್ಲಿ ಜಯ ಗಳಿಸುವುದು ಮಮತಾ ಬ್ಯಾನರ್ಜಿಗೆ ಅನಿವಾರ್ಯವಾಗಿದೆ. ಈ ಹಿನ್ನೆಲೆ ಕಾಂಗ್ರೆಸ್ ಹೈಕಮಾಂಡ್ ಆಜ್ಞೆಯಂತೆ ಟಿಎಂಸಿ ಎದುರು ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯಿಂದ ಪ್ರೇರಣೆಗೆ ಒಳಪಟ್ಟು ಬಿಜೆಪಿಗೆ ಆಗಸ್ಟ್ 2014 ರಲ್ಲಿ ಸೇರ್ಪಡೆಯಾದ ಬಾಬೂಲ್ ಸುಪ್ರಿಯೋರ ಕಾನೂನು ಸಲಹೆಗಾರರಾಗಿ ವಕೀಲೆ ಪ್ರಿಯಾಂಕ ಟಿಬ್ರೆವಾಲ್ ಕಾರ್ಯ ನಿರ್ವಹಿಸುತ್ತಿದ್ದರು. 2015 ರಲ್ಲಿ ಕೋಲ್ಕತಾ ಮುನ್ಸಿಪಲ್ ಕೌನ್ಸಿಲ್ ಚುನಾವಣೆಯಲ್ಲಿ ವಾರ್ಡ್ ಸಂಖ್ಯೆ 58 ರಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪ್ರಿಯಾಂಕ ಟಿಬ್ರೆವಾಲ್ ಸ್ಪರ್ಧಿಸಿದ್ದರು. ಆದರೆ ತೃಣಮೂಲ ಕಾಂಗ್ರೆಸ್‌ನ ಸ್ಪಪನ್ ಸಮ್ಮದರ್ ಎದುರು ಪರಾಭವಗೊಂಡಿದ್ದಾರೆ.
ಯಾರಿದು ವಕೀಲೆ ಪ್ರಿಯಾಂಕ ಟಿಬ್ರೆವಾಲ್?
ಬಿಜೆಪಿ ಪಕ್ಷದಲ್ಲಿದ್ದ ತಮ್ಮ ಆರು ವರ್ಷಗಳ ಕಾಲದಲ್ಲಿ ಪ್ರಿಯಾಂಕ ಬಿಜೆಪಿಯ ಹಲವಾರು ಕಾರ್ಯಗಳನ್ನು ನಿರ್ವಹಿಸಿದ್ದಾರೆ. 2020 ರಲ್ಲಿ ಪಶ್ಚಿಮ ಬಂಗಾಳದ ಭಾರತೀಯ ಜನತಾ ಯುವ ಮೋರ್ಚಾದ ಉಪಾಧ್ಯಕ್ಷೆಯಾಗಿ ಪ್ರಿಯಾಂಕ ಟಿಬ್ರೆವಾಲ್ ಆಯ್ಕೆಯಾಗಿದ್ದಾರೆ. ಇನ್ನು 2021 ರಲ್ಲಿ ವಕೀಲೆ ಪ್ರಿಯಾಂಕ ಟಿಬ್ರೆವಾಲ್ ಇಂತಲಿ ಕ್ಷೇತ್ರದಲ್ಲಿ ವಿಧಾನ ಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಆದರೆ ಟಿಎಂಸಿಯ ಸ್ವರ್ಣ ಕಮಲ್ ಸಹಾ ಎದುರು 58,257 ಮತಗಳ ಅಂತರದ ಸೋಲನ್ನುಡಿದ್ದಾರೆ. 1981 ರಲ್ಲಿ ಜುಲೈ 7 ರಂದು ಕೋಲ್ಕತ್ತಾದಲ್ಲಿ ಜನಿಸಿದ ಪ್ರಿಯಾಂಕ ಟಿಬ್ರೆವಾಲ್, ತನ್ನ ಶಾಲಾ ಶಿಕ್ಷಣವನ್ನು ವೆಲ್ಯಾಂಡ್ ಗೌಲ್ಡ್ಸ್ಮಿತ್ ಶಾಲೆಯಲ್ಲಿ ಕಲಿತಿದ್ದಾರೆ. ದೆಹಲಿ ವಿಶ್ವವಿದ್ಯಾಲಯದಿಂದ ಪದವಿ ಪಡೆದಿದ್ದಾರೆ. ಬಳಿಕ ತನ್ನ ಕಾನೂನು ಪದವಿಯನ್ನು 2007 ರಲ್ಲಿ ಕೋಲ್ಕತ್ತಾ ವಿಶ್ವವಿದ್ಯಾನಿಲಯದ ಅಡಿಯಲ್ಲಿ ಹಜ್ರಾ ಕಾನೂನು ಕಾಲೇಜಿನಿಂದ ಪಡೆದಿದ್ದಾರೆ. ಹಾಗೆಯೇ ಎಂಬಿಎ ಪದವಿಯನ್ನು ಥೈಲಾಂಡ್ ಅಸಮ್ಷನ್ ವಿಶ್ವವಿದ್ಯಾನಿಲಯದಿಂದ ಪಡದಿದ್ದಾರೆ.
"ನಾನು ಪ್ರಧಾನಿ ಮೋದಿಯ ಸಂದೇಶಕಿ"