ಅಗ್ನಿ ಶಾಮಕ ಠಾಣೆಗೆ ಚಾಲನೆ ಮಾಡಿದ ಗೃಹ ಸಚಿವ ಅರಗ ಜ್ಞಾನೇಂದ್ರ | Dharwad |
ಧಾರವಾಡ ತಾಲೂಕಿನ ಬೇಲೂರು ಕೈಗಾರಿಕಾ ಪ್ರದೇಶದಲ್ಲಿ ನೂತನವಾಗಿ ಸ್ಥಾಪಿಸಲಾದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಠಾಣೆಯನ್ನು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಬುಧವಾರ ಉದ್ಘಾಟಿಸಿ, ನಂತರ ನೂತನ ಕಟ್ಟಡ, ಅಗ್ನಿಶಾಮಕ ವಾಹನಗಳಿಗೆ ಚಾಲನೆ ನೀಡಿದರು. ಅಗ್ನಿಶಾಮಕ ದಳದವರು ಕೂಡಾ ಸಚಿವರಿಗೆ ಗೌರವ ವಂದನೆ ಸಲ್ಲಿಸಿದರು.ಇನ್ನು ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಅಮೃತ ದೇಸಾಯಿ ಸೇರಿದಂತೆ ಅಗ್ನಿಶಾಮಕ ಇಲಾಖೆಯ ಹಿರಿಯ ಅಧಿಕಾರಿಗಳು ಭಾಗಿಯಾಗಿದ್ದರು...