ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆ ವಿಧೇಯಕ ಮಂಡಿಸಿದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು ವಿಧಾನ ಸಭೆಯಲ್ಲಿ ಆನ್ಲೈನ್ ಬೆಟ್ಟಿಂಗ್ ಪ್ರತಿಬಂಧಕ ಕಾಯ್ದೆಯ ವಿಧೇಯಕವನ್ನು ಮಂಡಿಸಿದರು. ಈ ವೇಳೆ ಮಾತನಾಡಿ, ರಾಜ್ಯದಲ್ಲಿ ಆನ್ಲೈನ್ ಗ್ಯಾಂಬಲಿಂಗ್ ನಿಷೆೀಧದ ನಿಟ್ಟಿನಲ್ಲಿ ಇದೊಂದು ರ‍್ಕಾರದ ಮಹತ್ವದ ಹೆಜ್ಜೆ ಎಂದು ಬಣ್ಣಿಸಿದರು. ಈ ತಿದ್ದುಪಡಿ ವಿಧೇಯಕ ಲಾಟರಿ, ಕುದುರೆ ರೇಸ್ ಗೆ ಅನ್ವಯವಾಗುವುದಿಲ್ಲ. ಉಳಿದಂತೆ ಮೊಬೈಲ್, ಕಂಪ್ಯೂಟರ್ ಸೇರಿದಂತೆ ಇನ್ನಿತರ ಆನ್ ಲೈನ್ ಜೂಜಾಟ, ಬೆಟ್ಟಿಂಗ್ ಗಳಿಗೆ ಅನ್ವಯವಾಗಲಿದೆ. ಆನ್ ಲೈನ್ ಗ್ಯಾಂಬ್ಲಿಂಗ್ ತೊಡಗುವವರಿಗೆ, ಸಹಾಯ ಮಾಡುವವರಿಗೆ ಹಾಗೂ ಆಶ್ರಯ ನೀಡುವವರಿಗೂ ೬ ತಿಂಗಳು ಜೈಲುಶಿಕ್ಷೆ ಹಾಗೂ ೧೦ ಸಾವಿರ ರೂ ದಂಡ ವಿಧಿಸಲಾಗುವುದು ಎಂದು ಹೇಳಿದ್ದಾರೆ.