ಹುಬ್ಬಳ್ಳಿಗೆ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಮುಖ್ಯಮಂತ್ರಿಯವರಿಂದ ಸ್ವಾಗತ | Hubli |

ವಿಜಯನಗರ ಜಿಲ್ಲೆಯ ಹೊಸಪೇಟೆಯ ತುಂಗಭದ್ರಾ ಜಲಾಶಯ ಮತ್ತು ಐತಿಹಾಸಿಕ ಹಂಪಿ ಪ್ರವಾಸ ಮುಗಿಸಿಕೊಂಡು ಬಂದ ಗೌರವಾನ್ವಿತ ಉಪರಾಷ್ಟ್ರಪತಿಯವರಾದ ಶ್ರೀ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಪತ್ನಿ ಶ್ರೀಮತಿ ಎಂ.ಉಷಾ ಅವರನ್ನು ಇಂದು ಬೆಳಿಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿಯವರಾದ ಬಸವರಾಜ ಬೊಮ್ಮಾಯಿ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಕೈಮಗ್ಗ,ಜವಳಿ,ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ, ಜಿಲ್ಲಾಧಿಕಾರಿಗಳಾದ ನಿತೇಶ್ ಕೆ ಪಾಟೀಲ, ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತರಾದ ಲಾಬೂರಾಮ್ ಉಪಸ್ಥಿತರಿದ್ದರು. ನಂತರ ಗೋಕುಲ ರಸ್ತೆಯ ಖಾಸಗಿ ಹೊಟೆಲ್ವೊಂದರಲ್ಲಿ ಏರ್ಪಡಿಸಿದ್ದ ಮದುವೆ ಸಮಾರಂಭದಲ್ಲಿ ಭಾಗವಹಿಸಿ ಮರಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಉಪರಾಷ್ಟ್ರಪತಿಯವರು ಭಾರತೀಯ ವಾಯುಸೇನೆಯ ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದರು.