ನಾನು ಮುಖ್ಯಮಂತ್ರಿ ಆಕಾಂಕ್ಷಿ ಉಮೇಶ್ ಕತ್ತಿ | Chamarajanagar |
ನಾನು ಸಹ ಮುಖ್ಯಮಂತ್ರಿ ಶಾಶ್ವತ ಆಕಾಂಕ್ಷಿ. ನಮ್ಮ ಸರ್ಕಾರದಲ್ಲಿ ಯಾವುದೇ ಭಿನ್ನಮತ ಇಲ್ಲ ಎಂದು ಅರಣ್ಯ ಸಚಿವ ಉಮೇಶ್ ಕತ್ತಿ ಹೇಳಿದರು. ಗಡಿ ಜಿಲ್ಲೆ ಚಾಮರಾಜನಗರದ ರಾಷ್ಟ್ರೀಯ ಉದ್ಯಾನವನ ಬಂಡೀಪುರದಲ್ಲಿ ಮಾತನಾಡಿ, ನನಗೆ 60 ವರ್ಷ, ಇನ್ನೂ 15 ವರ್ಷ ಮುಖ್ಯಮಂತ್ರಿ ಆಗುವ ಚಾನ್ಸ್ ಇದೆ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಇನ್ನು ಪಕ್ಷದಲ್ಲಿ ಯಾವುದೇ ಭಿನ್ನಮತ ಇದ್ದರೂ ಕುಳಿತು ನಮ್ಮಲ್ಲಿಯೇ ಬಗೆಹರಿಸಿಕೊಳ್ಳುತ್ತೇವೆ. ನಮ್ಮ ಸರ್ಕಾರ ಸುಭದ್ರವಾಗಿದೆ. ಇನ್ನೂ ಎರಡು ವರ್ಷಗಳ ಕಾಲ ಸರ್ಕಾರ ಇರುತ್ತೆ. ನಂತರ ಬೊಮ್ಮಾಯಿ ನೇತೃತ್ವದಲ್ಲೇ ಚುನಾವಣೆಗೆ ಹೋಗ್ತೀವಿ ಎಂದು ಹೇಳಿದರು