ಇಂದಿನ ಪಂದ್ಯದಲ್ಲಿ ತಮ್ಮದೇ ಶೈಲಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ರಿಷಬ್ ಪಂತ್, ಬಂದ ಕೂಡಲೇ ಬೌಂಡರಿ ಕಲೆಹಾಕಲು ಆರಂಭಿಸಿದರು. ಪಂತ್ ತಮ್ಮ ಇನ್ನಿಂಗ್ಸ್‌ನಲ್ಲಿ 6 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳನ್ನು ಹೊಡೆದಿದ್ದಲ್ಲದೆ, 100ಕ್ಕೂ ಹೆಚ್ಚು ಸ್ಟ್ರೈಕ್ ರೇಟ್ನಲ್ಲಿ ಬ್ಯಾಟ್ ಬೀಸಿದರು. ಈ ಪಂದ್ಯದಲ್ಲಿ ಪಂತ್ ಅರ್ಧಶತಕವನ್ನು ಗಳಿಸದೇ ಇರಬಹುದು. ಆದರೆ 46 ರನ್‌ಗಳ ಈ ಇನ್ನಿಂಗ್ಸ್‌ನಲ್ಲಿ 2 ವಿಶೇಷ ಮೈಲಿಗಲ್ಲುಗಳನ್ನು ಸಾಧಿಸಿದರು. ಮೊದಲನೆಯದಾಗಿ, ಪಂತ್ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ತಮ್ಮ 4000 ರನ್‌ಗಳನ್ನು ಪೂರ್ಣಗೊಳಿಸಿದರು.