IND vs NZ: ಕಿವೀಸ್ ವಿರುದ್ಧದ ಮೊದಲ ಪಂದ್ಯಕ್ಕೆ ಆಡುವ 11ರ ಬಳಗ ಆಯ್ಕೆ ಮಾಡಿದ ವಾಸಿಂ ಜಾಫರ್
ಅಕ್ಟೋಬರ್-ನವೆಂಬರ್‌ನಲ್ಲಿ ಭಾರತದಲ್ಲಿ ನಡೆಯಲಿರುವ 2023ರ ಏಕದಿನ ವಿಶ್ವಕಪ್‌ಗೆ ತಯಾರಿಗಾಗಿ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಆಡಲು ಸಜ್ಜಾಗಿದೆ.
ಕಳೆದ ಏಕದಿನ ವಿಶ್ವಕಪ್‌ನ ರನ್ನರ್-ಅಪ್ ತಂಡದ ವಿರುದ್ಧ ಹೈದರಾಬಾದ್‌ನಲ್ಲಿ ಭಾರತದ ತನ್ನ ಮೊದಲ ಏಕದಿನ ಪಂದ್ಯಕ್ಕೂ ಮುನ್ನ, ಮಾಜಿ ಕ್ರಿಕೆಟಿಗ ವಾಸಿಂ ಜಾಫರ್ ಅವರು ಭಾರತ ತಂಡದ ಆಡುವ 11ರ ಬಳಗವನ್ನು ಆಯ್ಕೆ ಮಾಡಿದ್ದಾರೆ.
ಬೌಲಿಂಗ್ ಆಲ್‌ರೌಂಡರ್ ಶಾರ್ದೂಲ್ ಠಾಕೂರ್ ಮತ್ತು ಸ್ಪಿನ್ನರ್ ಯುಜ್ವೇಂದ್ರ ಚಹಾಲ್ ಅವರನ್ನು ವಾಸಿಂ ಜಾಫರ್ ತಮ್ಮ ಆಡುವ ಹನ್ನೊಂದರ ಬಳಗದಿಂದ ಹೊರಗಿಟ್ಟಿದ್ದಾರೆ. ಆದರೆ, ಆಲ್‌ರೌಂಡರ್ ವಾಷಿಂಗ್ಟನ್ ಸುಂದರ್‌ಗೆ ಅವಕಾಶ ನೀಡಿದ್ದಾರೆ.
ಇನ್ನು ವಿಕೆಟ್ ಕೀಪರ್- ಬ್ಯಾಟರ್ ಇಶಾನ್ ಕಿಶನ್ ಮತ್ತು ಸ್ಫೋಟಕ ಸೂರ್ಯಕುಮಾರ್ ಯಾದವ್ ಅವರಿಗೆ ಆಡುವ ಭಾರತದ ತಂಡದಲ್ಲಿ ವಾಸಿಂ ಜಾಫರ್ ಸ್ಥಾನ ನೀಡಿದ್ದಾರೆ.