IND vs SL: ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಟೀಮ್ ಇಂಡಿಯಾ ನಿರ್ಮಿಸಿದ ವಿಶ್ವ ದಾಖಲೆ ಯಾವುದು?
ತಿರುವನಂತಪುರ: ಶ್ರೀಲಂಕಾ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 317 ರನ್ಗಳ ಭರ್ಜರಿ ಜಯ ಸಾಧಿಸಿದೆ. ಇದರೊಂದಿಗೆ ಏಕದಿನ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಧಿಕ ರನ್ಗಳ ಅಂತರದಿಂದ ಗೆದ್ದ ವಿಶ್ವ ದಾಖಲೆ ಟೀಮ್ ಇಂಡಿಯಾ ಪಾಲಾಗಿದೆ. 2008ರಲ್ಲಿ ನ್ಯೂಜಿಲೆಂಡ್ ತಂಡವು ಐರ್ಲೆಂಡ್ ವಿರುದ್ಧ 290 ರನ್, 2015ರಲ್ಲಿ ಆಸ್ಟ್ರೇಲಿಯಾ ತಂಡವು ಅಫ್ಘಾನಿಸ್ತಾನ ವಿರುದ್ಧ 275 ರನ್, 2010ರಲ್ಲಿ ದಕ್ಷಿಣ ಆಫ್ರಿಕಾ ತಂಡ ಜಿಂಬಾಬ್ವೆ ವಿರುದ್ಧ 272 ರನ್ಗಳ ಜಯ ಸಾಧಿಸಿತ್ತು