ಆಪ್ತನ ಮನೆ ಮೇಲೆ IT ದಾಳಿ; ಬಿ.ಎಸ್.ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಆಪ್ತನ ಮನೆ ಮೇಲೆ IT ದಾಳಿ; ಬಿ.ಎಸ್.ಯಡಿಯೂರಪ್ಪ ಮೊದಲ ಪ್ರತಿಕ್ರಿಯೆ

ಶಿವಮೊಗ್ಗ: ಆಪ್ತ ಸಹಾಯಕನಾಗಿದ್ದ ಉಮೇಶ್ ನಿವಾಸ, ಕಚೇರಿ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿರುವ ವಿಚಾರವಾಗಿ ಮೊದಲ ಬಾರಿ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಯಾರೇ ತಪ್ಪು ಮಾಡಿದರೂ ಐಟಿ ಅಧಿಕಾರಿಗಳು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಶಿವಮೊಗ್ಗದ ಶಿಕಾರಿಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ, ತಪ್ಪು ಯಾರೇ ಮಾಡಿದ್ದರೂ ಐಟಿ ಅಧಿಕಾರಿಗಳು ಯಾರನ್ನೂ ಬಿಡಲ್ಲ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತಾರೆ. ಉಮೇಶ್ ನಾನು ಸಿಎಂ ಆಗಿದ್ದಾಗಲೂ ಆಪ್ತ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. ಈಗ ಬೊಮ್ಮಾಯಿ ಸರ್ಕಾರದಲ್ಲೂ ಆಪ್ತ ಸಹಾಯಕರಾಗಿ ಕೆಲಸ ಮಾಡುತ್ತಿದ್ದಾರೆ. ಯಾವ ಕಾರಣಕ್ಕೆ ದಾಳಿ ನಡೆದಿದೆ ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಹೇಳಿದರು.

ವಾಸ್ತವ ಸಂಗತಿ ಏನೆಂಬುದು ನನಗೆ ಗೊತ್ತಿಲ್ಲ. ಐಟಿ ಅಧಿಕಾರಿಗಳು ತಮ್ಮ ಕರ್ತವ್ಯ ಮಾಡುತ್ತಿದ್ದಾರೆ. ಐಟಿ ದಾಳಿ ಸಹಜವಾಗಿ ನಡೆಯುತ್ತಿರುತ್ತದೆ. ಇದಕ್ಕೂ ಉಪಚುನಾವಣೆಗೂ ಯಾವುದೇ ಸಂಬಂಧವಿಲ್ಲ. ಇದು ರಾಜಕೀಯ ಪ್ರೇರಿತ ಐಟಿ ದಾಳಿ ಎಂಬುದು ಸುಳ್ಳು ಎಂದು ತಿಳಿಸಿದರು.