ಲಕ್ಷ್ಮಣ ಸವದಿಗೆ ಸಚಿವ ಸ್ಥಾನ ನೀಡದಿದ್ದರೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡ್ತೇವೆ
ನೂತನ ಸಿಎಂ ರಾಜ್ಯದ ಗಾಣಿಗ ಸಮುದಾಯವನ್ನು ನಿರ್ಲಕ್ಷ್ಯ ಮಾಡಿದೆ. ಕೂಡಲೇ ಸಚಿವ ಸಂಪುಟ ವಿಸ್ತರಣೆ ಮಾಡಿ ಗಾಣಿಗ ಸಮುದಾಯದ ಮುಖಂಡ ಲಕ್ಷ್ಮಣ ಸವದಿ ಅವರಿಗೆ, ಸಚಿವ ಸ್ಥಾನ ನೀಡಬೇಕೆಂದು ವಿಜಯಪುರದ ದಿಗಂಬರೇಶ್ವರ ಸಂಸ್ಥಾನಮಠದ ಶ್ರೀ ಕಲ್ಲಿನಾಥ ಮಹಾಸ್ವಾಮೀಜಿ ಒತ್ತಾಯಿಸಿದರು. ನಗರದಲ್ಲಿಂದು ಮಾತನಾಡಿದ ಅವರು, ರಾಜ್ಯದಲ್ಲಿ 85 ಲಕ್ಷಕ್ಕೂ ಅಧಿಕ ಗಾಣಿಗ ಸಮುದಾಯದ ಜನರಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರು ನಮ್ಮ ಸಮುದಾಯವನ್ನು ಕಡೆಗಣಿಸಿದ್ದಾರೆ. ಕೂಡಲೇ ಸಮುದಾಯದ ಮುಖಂಡರಿಗೆ ಸ್ಥಾನಮಾನ ನೀಡಬೇಕು. ಇಲ್ಲದೇ ಹೋದರೆ ಮುಂದಿನ ಚುನಾವಣೆಯಲ್ಲಿ ಜನರು ತಕ್ಕ ಉತ್ತರ ನೀಡಲಿದ್ದಾರೆಂದು ಎಂದು ಎಚ್ಚರಿಕೆ ನೀಡಿದರು. ಪತ್ರಿಕಾಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಚಂದ್ರಶೇಖರ ಕಾಕಂಡಕಿ , ಬಸವರಾಜ ಔದರಿ ಇದ್ದರು