ಕಾಮದ ದೃಷ್ಟಿಯಲ್ಲಿ ನೋಡಿ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿದ ಪ್ರಾಚಾರ್ಯ
ಧಾರವಾಡ.
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ತಮ್ಮ ವಿದ್ಯಾರ್ಥಿನಿಯರನ್ನೇ ಕಾಮದ ದೃಷ್ಟಿಯಲ್ಲಿ ನೋಡಿ ಅವಾಚ್ಯ ಶಬ್ದಗಳನ್ನು ಬಳಕೆ ಮಾಡಿ ಮಾತನಾಡಿರುವ ವೀಡಿಯೋ ಇದೀಗ ವೈರಲ್ ಆಗಿದೆ. ಹೌದು ಧಾರವಾಡ ಸರ್ಕಾರಿ ಕಾಲೇಜಿನ ಪ್ರಾಚಾರ್ಯನ ವಿರುದ್ಧ ವಿದ್ಯಾರ್ಥಿಗಳು ಹಾಗೂ ರಾಮ್ ಸೇನೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ ನಿನ್ನೆಯಷ್ಟೇ ಪರೀಕ್ಷೆ ಮುಕ್ತಾಯಗೊಂಡ ಬಳಿಕ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಸಂಭ್ರಮಾಚರಣೆ ಮಾಡುತ್ತಿದ್ದರು .ಇದನ್ನು ವೀಡಿಯೋ ಮಾಡಿರುವ ಕಾಲೇಜಿನ ಇನ್ನೋರ್ವ ಉಪನ್ಯಾಸಕ ಹಾಗೂ ಪ್ರಾಚಾರ್ಯ ಈ ವೇಳೆ ವಿದ್ಯಾರ್ಥಿನಿಯರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿ ಅವರನ್ನು ಕಾಮದ ದೃಷ್ಟಿಯಲ್ಲಿ ನೋಡಿದ್ದಾರೆ. ಈ ವೀಡಿಯೋ ವೈರಲ್ ಆಗುತ್ತಿದ್ದಂತೆ ರಾಮ್ ಸೇನೆ ಕಾರ್ಯಕರ್ತರು ಕಾಲೇಜಿಗೆ ತೆರಳಿ ಪ್ರಾಚಾರ್ಯನನ್ನು ಅಮಾನತ್ತು ಮಾಡುವಂತೆ ಆಗ್ರಹಿಸಿದರು. ಇನ್ನು ವಿದ್ಯಾರ್ಥಿನಿಯರ ಬಗ್ಗೆ ಕೆಟ್ಟದಾಗಿ ಮಾತನಾಡಿದ ತಮ್ಮ ಪ್ರಾಚಾರ್ಯರರ ವಿರುದ್ಧವೇ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಕಾಲೇಜಿನ ಮುಂದೆ ಪ್ರತಿಭಟನೆ ನಡೆಸಿದರು. ಸ್ಥಳಕ್ಕೆ ಪ್ರಾಚಾರ್ಯನನ್ನು ಕರೆಸುವಂತೆ ಪಟ್ಟು ಸಹ ಹಿಡಿದಿದ್ದಾರೆ.