ಕಲಬುರಗಿಯಲ್ಲಿ ಸಂಭ್ರಮದ ಸ್ವಾತಂತ್ರ‍್ಯ ದಿನಾಚರಣೆ

೭೫ನೇ ಸ್ವಾತಂತ್ರ‍್ಯ ದಿನಾಚರಣೆ ನಿಮಿತ್ತ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಡಿ.ಆರ್. ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿದರು. ಧ್ವಜಾರೋಹಣ ಬಳಿಕ ಸಚಿವರು ಗೌರವ ವಂದನೆ ಸ್ವೀಕರಿಸಿದರು. ಸಂಸದ ಉಮೇಶ ಜಾಧವ, ಶಾಸಕರಾದ ಬಸವರಾ ಮತ್ತಿಮೂಡ, ಪ್ರಾದೇಶಿಕ ಆಯುಕ್ತ ಡಾ.ಎನ್.ವಿ.ಪ್ರಸಾದ, ಡಿ.ಸಿ.ವಿ.ವಿ.ಜ್ಯೋತ್ಸ್ನಾ, ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ, ಎಸ್.ಪಿ. ಡಾ.ಸಿಮಿ ಮರಿಯಮ್ ಜಾರ್ಜ್ ಉಪಸ್ಥಿತರಿದ್ದರು.