ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯ

ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕು ಬಸಾಪುರ ಗ್ರಾಮದಲ್ಲಿ ಬುಧವಾರ ಗ್ರಾಮಸ್ಥರು ಮತ್ತು ವಿದ್ಯಾರ್ಥಿಗಳು ಏಕಾಏಕಿ ರಸ್ತೆ ತಡೆದು ಪ್ರತಿಭಟನೆಯನ್ನು ಮಾಡಿದರು. ಈ ಗ್ರಾಮಕ್ಕೆ ಸಮರ್ಪಕವಾಗಿ ಬಸ್ಸುಗಳು ಇಲ್ಲದೇ ಇರುವುದರಿಂದ ಹಾಗೂ ಗ್ರಾಮದಿಂದ ಸರಿಸುಮಾರು ಪ್ರತಿದಿನ ಎರಡು 200 ರಿಂದ 300 ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಇಲ್ಲಿಂದ ಪಕ್ಕದ ಅಣ್ಣಿಗೇರಿ ಹಾಗೂ ನವಲಗುಂದ ನಗರಕ್ಕೆ ತೆರಳುತ್ತಾರೆ. ಆದರೆ ಸರಿಯಾಗಿ ಬಸ್ಸುಗಳು ಬಾರದೆ ವಿದ್ಯಾರ್ಥಿಗಳಿಗೆ ತರಗತಿಗಳು ತಪ್ಪುತ್ತಿವೆ ಎಂದು ವಿದ್ಯಾರ್ಥಿಗಳು ತಮ್ಮ ಅಳಲನ್ನು ತೋಡಿಕೊಂಡರು. ಸಮರ್ಪಕವಾಗಿ ಬಸ್ಸುಗಳ ಸೌಲಭ್ಯ ಕಲ್ಪಿಸುವಂತೆ ಅನೇಕ ಸಲ ಮನವಿ ಪತ್ರಗಳನ್ನು ಸಲ್ಲಿಸಿದರೂ ಯಾವ ಅಧಿಕಾರಿಗಳು ತಿರುಗಿ ನೋಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಇನ್ನಾದರೂ ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳಾಗಲಿ ಜನಪ್ರತಿನಿಧಿಗಳಾಗಲಿ ಗ್ರಾಮಕ್ಕೆ ಬಸ್ಸಿನ ಸೌಲಭ್ಯ ಒದಗಿಸಬೇಕೆಂದು ಒತ್ತಾಯಿಸಿದರು