ವೈಯಕ್ತಿಕ ದ್ವೇಷ ಇಟ್ಟುಕೊಂಡು ಅರೋಪ ಮಾಡೋದು ಸರಿಯಲ್ಲ

ಬಿಟ್ ಕಾಯಿನ್ ಪ್ರಕರಣ ಸಂಬಂಧಿಸಿದಂತೆ ಬೀದರ್‍ನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಈಶ್ವರ್ ಖಂಡ್ರೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಬಿಟ್ ಕಾಯಿನ್ ಪ್ರಕರಣದಲ್ಲಿ ಯಾರೇ ಇರಲಿ,ಯಾವ ಪಕ್ಷದವರೇ ಭಾಗಿಯಾಗಿರಲಿ ಪಾರದರ್ಶಕವಾದ ತನಿಖೆಯಾಗಬೇಕು. ತಪ್ಪಿಸ್ಥರ ಮೇಲೆ ಕಾನೂನು ಕ್ರಮ ಜರುಗಿಸÀಬೇಕು ಎಂದು ಒತ್ತಾಯಿಸಿದರು. ಬಿಜೆಪಿಯು ರಾಜಕೀಯ ಪ್ರೇರಿತ ಹೇಳಿಕೆ ನೀಡುವುದನ್ನು ಬಿಡಬೇಕು. ವೈಯಕ್ತಿಕ ದ್ವೇಷ ಇಟ್ಟುಕೊಂಡು ಅರೋಪ ಮಾಡೋದು ಸರಿಯಲ್ಲ ಪ್ರಜಾಪ್ರಭುತ್ವ ಕಗ್ಗೊಲೆಯಾಗುತ್ತಿದ್ದು ಜನರೇ ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ಹೇಳಿದರು.