ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹರಿಹಾಯ್ದ ಜೆಡಿಎಸ್ ಪಕ್ಷ ಮುಖಂಡರು.... | Dharwad |
ಗೃಹ ಬಳಕೆ ಸಿಲಿಂಡರ್ ಬೆಲೆ ಏರಿಕೆ ಖಂಡಿಸಿ, ಧಾರವಾಡದಲ್ಲಿ, ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಗುರುರಾಜ ಹುಣಸಿಮರದ ನೇತೃತ್ವದಲ್ಲಿ, ಗೃಹ ಬಳಕೆ ಸಿಲಿಂಡರ್ ತೆಗೆದುಕೊಂಡು ಬಂದು ಪ್ರತಿಭಟನೆ ಮಾಡಿ ಸಿಲಿಂಡರ್ ಬೆಲೆ ಏರಿಕೆಯನ್ನು ಖಂಡಿಸಿದರು.ಇನ್ನು ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ ಜೆಡಿಎಸ್ ನಾಯಕರು, ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸಾಲು ಸಾಲು ಪ್ರಶ್ನೆಗಳನ್ನು ಕೇಳಿದರು. ಈಗಾಗಲೇ ಕೋವಿಡ್‌ನಿಂದ ಜನ ತತ್ತರಿಸಿ ಹೋಗಿದ್ದಾರೆ. ಕೊರೊನಾ ಲಾಕ್ ಡೌನನಿಂದಾಗಿ ದೇಶದ ಜನತೆ ಆರ್ಥಿಕವಾಗಿ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಗೃಹ ಬಳಕೆ ಸಿಲಿಂಡರ್ ಬೆಲೆಯನ್ನು ತಿಂಗಳದಲ್ಲಿ ಎರಡು ಮೂರು ಬಾರಿ ಏರಿಸುತ್ತಾ ಹೋದ್ರೆ ಜನರು ಜೀವನ ನಡೆಸುವುದು ಹೇಗೆ ಎಂದು ಮಾಜಿ ಶಾಸಕ ಕೋನರೆಡ್ಡಿ, ಜೆಡಿಎಸ್ ಮುಖಂಡ ಗುರುರಾಜ ಹುಣಶಿಮರದ ಅವರು ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿದ್ರು.....