JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪುನರಾಯ್ಕೆ: ಎಲ್ಲರಿಗೂ ಧನ್ಯವಾದವೆಂದ ದೊಡ್ಡಗೌಡರು | HD Devegowdha

JDS ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪುನರಾಯ್ಕೆ: ಎಲ್ಲರಿಗೂ ಧನ್ಯವಾದವೆಂದ ದೊಡ್ಡಗೌಡರು | HD Devegowdha

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ಯಾರಾಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇ ಪುನರಾಯ್ಕೆಯಾಗಿದ್ದಾರೆ.

ಈ ಸಂಬಂಧ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ 13 ರಾಜ್ಯಗಳ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.

ಇಂದಿನ ಸಭೆಯಲ್ಲಿ ಜೆಡಿಎಸ್ ಪಕ್ಷವನ್ನು ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಲವರ್ಧನೆ ಸೇರಿದಂತೆ ವಿವಿಧ ವಿಷಯಗಳ ಚರ್ಚೆ ಕೂಡ ನಡೆಯಿತು.

ಈ ಬಳಿಕ ಜೆಡಿಎಸ್ ರಾಷ್ಟ್ರೀ ಅಧ್ಯಕ್ಷರಾಗಿ ಹೆಚ್ ಡಿ ದೇವೇಗೌಡ ಅವರನ್ನು ಒಮ್ಮತದಿಂದ ಪುನರಾಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೊಂದು ಅವಧಿಗೆ ಮಾಜಿ ಪಿಎಂ ಹೆಚ್ ಡಿ ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಪುನರಾಯ್ಕೆ ಆದ ಬಳಿಕ ಮಾತನಾಡಿದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ನನ್ನನ್ನು ಪುನರಾಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾವು ಈಗ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಡಬೇಕಿದೆ. ಕೇರಳ ರಾಜ್ಯ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ಪಕ್ಷ ಬಲಪಡಿಸಲು ಒತ್ತು ನೀಡಲಾಗುತ್ತದೆ. ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇವೆ ಎಂದರು.