ಗಡಿ ಜಿಲ್ಲೆ ಬೀದರ್ ನಲ್ಲಿ ಜನ ಸ್ವರಾಜ ಯಾತ್ರೆ

ಗಡಿ ಜಿಲ್ಲೆ ಬೀದರ್ ನಲ್ಲಿ ಜನ ಸ್ವರಾಜ ಯಾತ್ರೆ, ಇಂದು 3 ಗಂಟೆಗೆ ಗಣೇಶ್ ಮೈದಾನದಲ್ಲಿ ನಡೆಯಲಿರುವ ಜನ ಸ್ವರಾಜ್ ಕಾರ್ಯಕ್ರಮ ನಡೆಯಲಿದೆ. ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಜನ ಸ್ವರಾಜ್ ಯಾತ್ರೆ ನಡೆಸುತ್ತಿದ್ದಾರೆ. ಕೇಂದ್ರ ಸಚಿವ ಭಗವಂತ್ ಖೂಬಾ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವ ಮುರುಗೇಶ್ ನಿರಾಣಿ, ವಿ.ಸೋಮಣ್ಣ, ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ರಾಜೂಗೌಡ ಸೇರಿದಂತೆ ಪಕ್ಷದ ನಾಯಕರು ಭಾಗಿಯಾಗಲಿದ್ದಾರೆ.ಅಲ್ಲದೆ ಜನ ಸ್ವರಾಜ್ ಕಾರ್ಯಕ್ರಮದಲ್ಲಿ 5 ಸಾವಿರ ಜನ ಸೇರುವ ನಿರೀಕ್ಷೆಯಿದೆ.